SIIMA Award | ನಟ ಸಮರ್ಜಿತ್‌ಗೆ ಡಬಲ್ ಪ್ರಶಸ್ತಿಗಳ ಧಮಾಕ

Public TV
1 Min Read

ಗೌರಿ ಸಿನಿಮಾದ ಮೂಲಕ ಭರವಸೆ ಮೂಡಿಸಿದ್ದ, ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟ ಸಮರ್ಜಿತ್ ಲಂಕೇಶ್ (Samarjit Lankesh) ಅವರಿಗೆ ಎರಡು ಪ್ರಶಸ್ತಿಗಳು ಲಭಿಸಿವೆ. `ಗೌರಿ’ ಚಿತ್ರಕ್ಕಾಗಿ (Gowri Cinema) ಸೈಮಾ (SIIMA Award) ಅತ್ಯುತ್ತಮ ಚೊಚ್ಚಲ ನಟ ಪ್ರಶಸ್ತಿ ಹಾಗೂ ಅತ್ಯುತ್ತಮ ಉದಯೋನ್ಮುಖ ನಟನಿಗಾಗಿ ಲುಮಿಯರ್ ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡಿದ್ದಾರೆ ಸಮರ್ಜಿತ್.

ಉದಯೋನ್ಮುಖ ನಟ ಸಮರ್ಜಿತ್ ಲಂಕೇಶ್ ತಮ್ಮ ವೃತ್ತಿಜೀವನಕ್ಕೆ ಮತ್ತೊಂದು ಗರಿ ಸೇರಿಸಿದ್ದಾರೆ. ಸತತವಾಗಿ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಗಳಿಸುವ ಮೂಲಕ ಭಾರತೀಯ ಚಿತ್ರರಂಗದ ಭರವಸೆಯ ಹೊಸ ಪ್ರತಿಭೆಗಳಲ್ಲಿ ಒಬ್ಬರಾಗಿ ಹೊರ ಹೊಮ್ಮಿದ್ದಾರೆ. ಇದೀಗ ಸಮರ್ಜಿತ್ ಬಾಲಿವುಡ್ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಇದನ್ನೂ ಓದಿ: ಮಲ್ಲಿಗೆ ಮುಡಿದ ನಟಿ ನವ್ಯಾಗೆ ಆಸ್ಟ್ರೇಲಿಯಾದಲ್ಲಿ 1 ಲಕ್ಷ ದಂಡ

ದುಬೈನಲ್ಲಿ ನಡೆದ 13ನೇ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2025ರ ಸಮಾರಂಭದಲ್ಲಿ ಸಮರ್ಜಿತ್ ತಮ್ಮ ಪ್ರಥಮ ಚಿತ್ರ `ಗೌರಿ’ಯಲ್ಲಿನ ಅದ್ಭುತ ಅಭಿನಯಕ್ಕಾಗಿ ಅತ್ಯುತ್ತಮ ಚೊಚ್ಚಲ ನಟ (ಕನ್ನಡ) ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರ ಈ ಭರವಸೆಯ ಹೆಜ್ಜೆ, ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ. ಇದನ್ನೂ ಓದಿ: `ಪುಷ್ಪ 3 ಬರೋದು ಪಕ್ಕಾ’..ಅಲ್ಲು ಅರ್ಜುನ್‌ ಗುಡ್ ನ್ಯೂಸ್ ಕೊಟ್ಟಿದ್ದೆಲ್ಲಿ?

 ದುಬೈನಲ್ಲಿ 13ನೇ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಸಮಾರಂಭದಲ್ಲಿ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಸಮರ್ಜಿತ್ ಅವರು ಅವಾರ್ಡ್ ಹಿಡಿದು ವೇದಿಕೆಯಲ್ಲಿ ಸಂಭ್ರಮಿಸಿದ್ದಾರೆ.

Share This Article