ಅಮೆರಿಕದ ಅತಿದೊಡ್ಡ ಬ್ಯಾಂಕ್ ದಿವಾಳಿ – Silicon Valley Bank ಬಂದ್

Public TV
2 Min Read

ವಾಷಿಂಗ್ಟನ್: ಸ್ವೀಸ್ ಬ್ಯಾಂಕ್ ನಷ್ಟದ ಬೆನ್ನಲ್ಲೇ ಸ್ಟಾರ್ಟ್‌ಅಪ್‍ಗಳಿಗೆ ಸಾಲ ನೀಡಲು ಹೆಸರುವಾಸಿಯಾದ ಸಿಲಿಕಾನ್ ವ್ಯಾಲಿ ಬ್ಯಾಂಕ್ (Silicon Valley Bank) ತನ್ನ ವ್ಯವಹಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಿದೆ.

ಟೆಕ್ ಸ್ಪಾರ್ಟ್‌ಅಪ್‍ಗಳಿಗೆ (Technology Startups) ಮೂಲ ಕಂಪನಿಯಾಗಿದ್ದ ಸಿಲಿಕಾನ್ ವ್ಯಾಲಿ ಬ್ಯಾಂಕ್‍ನ ಠೇವಣಿದಾರರು ಹಾಗೂ ಹೂಡಿಕೆದಾರರು ಬರೋಬ್ಬರಿ 282 ಲಕ್ಷ ಕೋಟಿ ರೂ. (42 ಬಿಲಿಯನ್ ಯುಎಸ್ ಡಾಲರ್) ಬೃಹತ್ ಮೊತ್ತದ ಹಣವನ್ನು ಹಿಂಪಡೆದ ಪರಿಣಾಮ ಬ್ಯಾಂಕ್‍ನ ನಗದು ವ್ಯವಹಾರದಲ್ಲಿ ಕೊರತೆ ಕಂಡುಬಂದಿತ್ತು. ಈ ಕಾರಣದಿಂದಾಗಿ ಬ್ಯಾಂಕ್ ವ್ಯವಹಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಕ್ಯಾಲಿಫೋರ್ನಿಯಾ ಬ್ಯಾಂಕಿಂಗ್ ಅಧಿಕಾರಿಗಳು ಶುಕ್ರವಾರ ಸಿಲಿಕಾನ್ ವ್ಯಾಲಿ ಬ್ಯಾಂಕ್ ಅನ್ನು ಮುಚ್ಚಿದ್ದಾರೆ. 2008ರ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ನಂತರ ಇದು ಅತಿದೊಡ್ಡ ಬ್ಯಾಂಕಿಂಗ್‍ನ ವೈಫಲ್ಯವಾಗಿದೆ.

ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವಂತಹ ಕಂಪನಿಗಳಿಗೆ ಹಾಗೂ ವೆಂಚರ್ ಕ್ಯಾಪಿಟಲಿಸ್ಟ್ ಹೊಂದಿರುವ ಕಂಪನಿಗಳಿಗೆ ಈ ಬ್ಯಾಂಕ್ ಬೆಂಬಲ ನೀಡಿದೆ. ಅದಲ್ಲದೆ, ಪ್ರಸ್ತುತ ಉದ್ಯಮದ ಪ್ರತಿಷ್ಠಿತ ಬ್ರ್ಯಾಂಡ್ ಆಗಿರುವ ಕಂಪನಿಯನ್ನೂ ಸಿಲಿಕಾನ್ ವ್ಯಾಲಿ ಬ್ಯಾಂಕ್ ಬೆಂಬಲಿಸಿತ್ತು.

ಬಿಕ್ಕಟ್ಟಿಗೆ ಕಾರಣವೇನು?: ಎಸ್‍ವಿಬಿ ಮಾತೃ ಸಂಸ್ಥೆಯಾದ ಎಸ್‍ವಿಬಿ ಫೈನಾನ್ಸಿಯಲ್ ಗ್ರೂಪ್, ತನ್ನ ಭಾಗವಾಗಿರುವ 21 ಬಿಲಿಯನ್ ಡಾಲರ್‍ನಷ್ಟು ಮೌಲ್ಯದ ಬಾಂಡ್ಸ್ ಮತ್ತು ಡಿಬೆಂಚರ್ಸ್ ಅನ್ನು ಮಾರಾಟ ಮಾಡುವುದಾಗಿ ಘೋಷಿಸಿದ ಬೆನ್ನಲ್ಲೇ ಹೂಡಿಕೆದಾರರು ಮತ್ತು ಠೇವಣಿದಾರರಲ್ಲಿ ಆತಂಕ ಹುಟ್ಟಿಸಲು ಕಾರಣವಾಗಿತ್ತು. ಇದರ ಮುಂದುವರಿದ ಭಾಗವಾಗಿ ಸಿಲಿಕಾನ್ ವ್ಯಾಲಿ ಬ್ಯಾಂಕ್‍ನ ಗ್ರಾಹಕರು ಭಾರೀ ಪ್ರಮಾಣದ ಠೇವಣಿ ಹಿಂಪಡೆದಿದ್ದು, ಸ್ಟಾರ್ಟ್‍ಅಪ್ ಇಂಡಸ್ಟ್ರಿ ಮೇಲೆ ದೊಡ್ಡ ಹೊಡೆತ ಬಿದ್ದಿದೆ.

ಇದರಿಂದಾಗಿ ಸಿಲಿಕಾನ್ ವ್ಯಾಲಿ ಬ್ಯಾಂಕ್‍ನಲ್ಲಿ ಆರ್ಥಿಕ ಕುಸಿತ ಉಂಟಾಗಿದೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆಯೇ ಎಸ್‍ವಿಬಿ ಷೇರು ಮೌಲ್ಯ ಕುಸಿತ ಕಂಡಿತ್ತು. ಇದರ ಪರಿಣಾಮವಾಗಿ 80 ಬಿಲಿಯನ್ ಡಾಲರ್ ನಷ್ಟ ಅನುಭವಿಸಿದೆ. ಈ ನಿಟ್ಟಿನಲ್ಲಿ ಬ್ಯಾಂಕ್ ಅನ್ನು ತಾತ್ಕಾಲಿಕವಾಗಿ ಮುಚ್ಚಲು ಸೂಚನೆ ನೀಡಿದೆ. ಇದನ್ನೂ ಓದಿ: ಮಹಿಳೆಯರ ಮನ ಗೆಲ್ಲಲು ಹೊರಟ ಬಿಜೆಪಿ – ಕಮಲ್ ಮಿತ್ರ ಹೆಸರಿನಲ್ಲಿ ಹೊಸ ಅಭಿಯಾನ

ಸೋಮವಾರ ಬೆಳಗ್ಗೆ ಬ್ಯಾಂಕ್‍ನ ಎಲ್ಲ ಶಾಖೆಗಳನ್ನು ತೆರೆದ ನಂತರ ಅವರು ವಿಮೆ ಮಾಡಿದ ಠೇವಣಿಗಳನ್ನು ವಾಪಸ್ ನೀಡುವುದಾಗಿ ಠೇವಣಿದಾರರಿಗೆ ಎಫ್‍ಡಿಐಸಿ ಭರವಸೆ ನೀಡಿದೆ. ಇದನ್ನೂ ಓದಿ: ಎರಡು ಕಾಲಿರುವ ಯಾರೇ ಬಂದರೂ ಚುನಾವಣೆಯಲ್ಲಿ ಎದುರಿಸಲು ಸಿದ್ಧ: ಬಿ.ನಾಗೇಂದ್ರ

Share This Article
Leave a Comment

Leave a Reply

Your email address will not be published. Required fields are marked *