ಸಂಗೀತ ಕಾರ್ಯಕ್ರಮದಲ್ಲೇ ಸೋನು ನಿಗಮ್ ಒದ್ದಾಟ- ಆಸ್ಪತ್ರೆಗೆ ದಾಖಲು

Public TV
1 Min Read

ಖ್ಯಾತ ಗಾಯಕ ಸೋನು ನಿಗಮ್ (Sonu Nigam) ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಪುಣೆಯಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ವೇಳೆ ಬೆನ್ನು ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್‌ಗೆ ಗಾಯಕ ಸೋಶಿಯಲ್ ಮೀಡಿಯಾದಲ್ಲಿ ವಿವರಿಸಿ ಪೋಸ್ಟ್ ಹಾಕಿದ್ದಾರೆ. ಇದನ್ನೂ ಓದಿ:ಮಹಾ ಕುಂಭಮೇಳದಲ್ಲಿ ಭಾಗಿಯಾದ ‘ಕೆಜಿಎಫ್ 2’ ಕ್ವೀನ್‌

ಇತ್ತೀಚೆಗೆ ಲೈವ್ ಕಾನ್ಸರ್ಟ್ ವೇಳೆ ಅವರಿಗೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದೆ. ನೋವು ಅನ್ನು ತೋರಿಸಿಕೊಳ್ಳದೇ ಒಪ್ಪಿಕೊಂಡಿದ್ದ ಸಂಗೀತ ಕಾರ್ಯಕ್ರಮವನ್ನು ಮುಗಿಸಿಕೊಟ್ಟು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆ ನಂತರ ಏನಾಯ್ತು ಎಂದು ಅವರು ವಿವರಿಸಿದ್ದಾರೆ.

 

View this post on Instagram

 

A post shared by Sonu Nigam (@sonunigamofficial)

ಸೋನು ನಿಗಮ್ ಪೋಸ್ಟ್‌ನಲ್ಲಿ, ನನ್ನ ಜೀವನದ ಅತ್ಯಂತ ಕಷ್ಟದ ದಿನ. ನಾನು ಹಾಡು ಹೇಳುತ್ತಾ, ವೇದಿಕೆ ಮೇಲೆಲ್ಲ ಓಡಾಡುತ್ತಾ ಇದ್ದೆ. ಆಗ ನನಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಆದರೆ, ಹೇಗೋ ಆ ಸಂದರ್ಭ ನಿಭಾಯಿಸಿದೆ. ಅಭಿಮಾನಿಗಳು ನನ್ನಿಂದ ಎಷ್ಟನ್ನು ನಿರೀಕ್ಷಿಸುತ್ತಾರೋ ಅದಕ್ಕಿಂತ ಕಡಿಮೆ ಕೊಡಲು ನನಗೆ ಇಷ್ಟ ಇಲ್ಲ ಎಂದು ಅವರು ಹೇಳಿದ್ದಾರೆ. ನನ್ನ ಬೆನ್ನು ಹುರಿಗೆ ಯಾರೋ ಇಂಜೆಕ್ಷನ್ ಸೂಜಿ ಇಟ್ಟಿದ್ದಾರೆ ಅನಿಸುತ್ತಿತ್ತು. ಸ್ವಲ್ಪ ಅಲ್ಲಾಡಿದರೂ ನೋವು ಹೆಚ್ಚಾಗುತ್ತಿತ್ತು ಎಂದು ಅವರು ಹೇಳಿರೋ ವಿಡಿಯೋ ಹಂಚಿಕೊಂಡಿದ್ದಾರೆ. ಪೋಸ್ಟ್‌ನಲ್ಲಿ ಕ್ಯಾಪ್ಶನ್‌ನಲ್ಲಿ ರಾತ್ರಿ ಸರಸ್ವತಿ ನನ್ನ ಕೈ ಹಿಡಿದರು ಎಂದಿದ್ದಾರೆ.

ಇನ್ನೂ ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ಅವರು ಹಾಡಿದ್ದಾರೆ. ‘ಪರಮಾತ್ಮ’ ಸಿನಿಮಾದ ಪರವಶನಾದೆನು ಸಾಂಗ್, ‘ಜಾನು’ ಸಿನಿಮಾದಲ್ಲಿ ‘ನೀನು ನನ್ನ ಸವಿಗನಸು’ ಸೇರಿದಂತೆ ಹಲವಾರು ಹಾಡುಗಳನ್ನು ಹಾಡಿದ್ದಾರೆ. ಬಹುಭಾಷಾ ಗಾಯಕನಾಗಿ ಗುರುತಿಸಿಕೊಂಡಿದ್ದಾರೆ.

Share This Article