ಕ್ಲಬ್‍ನಲ್ಲಿ ಬಾಲಿವುಡ್ ಗಾಯಕ ಹನಿ ಸಿಂಗ್ ಮೇಲೆ ಹಲ್ಲೆಗೆ ಯತ್ನ

Public TV
1 Min Read

ಗರದ ಕ್ಲಬ್‍ವೊಂದರಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಗಾಯಕ ಹಿರ್ದೇಶ್ ಸಿಂಗ್ ನನ್ನ ಜೊತೆ ಅಮಾನುಷವಾಗಿ ವರ್ತಿಸಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಾಲಿವುಡ್ ಜನಪ್ರಿಯ ಗಾಯಕ ಯೋ ಯೋ ಹನಿ ಸಿಂಗ್ ದೂರು ದಾಖಲಿಸಿದ್ದಾರೆ.

ಮಾರ್ಚ್ 27 ರಂದು ದಕ್ಷಿಣ ದೆಹಲಿಯ ಹೌಜ್ ಖಾಸ್ ಪ್ರದೇಶದ ಕ್ಲಬ್‍ವೊಂದರಲ್ಲಿ ನಡೆದ ಸಂಗೀತ ಕಾರ್ಯಕ್ರಮದ ವೇಳೆ ಬಾಲಿವುಡ್ ಗಾಯಕ ಹಿರ್ದೇಶ್ ಸಿಂಗ್, ನನ್ನೊಂದಿಗೆ ಅನುಚಿತವಾಗಿ ನಡೆದುಕೊಂಡರು ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದನ್ನೂ ಓದಿ: RGV ನಿರ್ದೇಶನದ ಲೆಸ್ಬಿಯನ್ ಸಿನಿಮಾ ಬಿಡುಗಡೆ ಮುಂದೂಡಿಕೆ

ಅಂದು ರಾತ್ರಿ ಹೊಸ ದೆಹಲಿಯ ಸೌತ್ ಎಕ್ಸ್-11 ನಲ್ಲಿರುವ ಕ್ಲಬ್‍ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿದ್ದಾಗ ಏಕಾಏಕಿ ಐದರಿಂದ ಆರು ಮಂದಿ ಅಪರಿಚಿತರು ಬಲವಂತವಾಗಿ ವೇದಿಕೆ ಮೇಲೆ ಬಂದು ಅಸಭ್ಯವಾಗಿ ವರ್ತಿಸಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರು ಎಂದು ಹನಿ ಸಿಂಗ್ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ- ರಾಜಮೌಳಿಗೆ ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?

ಕೆಲ ವ್ಯಕ್ತಿಗಳು ಬಿಯರ್ ಬಾಟಲಿಗಳನ್ನು ಹಿಡಿದುಕೊಂಡು ಕಲಾವಿದರನ್ನು ವೇದಿಕೆಯಿಂದ ತಳ್ಳಿದ್ದಾರೆ. ಅವರಲ್ಲಿ ಒಬ್ಬರು ನನ್ನ ಕೈ ಹಿಡಿದು ವೇದಿಕೆಯ ಮುಂಭಾಗಕ್ಕೆ ಎಳೆದು ತರಲು ಮುಂದಾದರು ಎಂದು ಆರೋಪಿಸಿದ್ದಾರೆ.

ಈ ವೇಳೆ ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಹನಿ ಸಿಂಗ್ ದೂರಿದ್ದಾರೆ. ಗಾಯಕನಿಂದ ದೂರನ್ನು ಸ್ವೀಕರಿಸಿದ ನಂತರ ವಿವಿಧ ಸೆಕ್ಷನ್‍ಗಳಡಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಗಾಗಲೇ ಕ್ಲಬ್‍ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದ್ದು, ಸಾಕ್ಷಿಗಳ ಹೇಳಿಕೆಯ ಆಧಾರದ ಮೇಲೆ ಐವರು ಆರೋಪಿಗಳನ್ನು ಗುರುತಿಸಲಾಗಿದೆ. ಇನ್ನಷ್ಟು ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಬೇಕಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *