ಸಹೋದರನ ಜೊತೆ ಜಗಳವಾಡಿ ಮೊಬೈಲನ್ನೇ ನುಂಗಿದ್ಳು!

By
1 Min Read

ಭೋಪಾಲ್: ಸಹೋದರನ ಜೊತೆ ಜಗಳವಾಡಿ 18ರ ಯುವತಿ ಮೊಬೈಲ್ ಫೋನ್ ನುಂಗಿ ಎಡವಟ್ಟು ಮಾಡಿಕೊಂಡ ಘಟನೆ ಮಧ್ಯಪ್ರದೇಶ (Madhyapradesh) ದ ಭಿಂಡ್ ಪ್ರದೇಶದಲ್ಲಿ ನಡೆದಿದೆ.

ಯುವತಿ ಮೊಬೈಲ್ ನುಂಗಿದ ವಿಚಾರ ಗೊತ್ತಾಗುತ್ತಿದ್ದಂತೆಯೇ ಆಕೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಸರ್ಜರಿ (Surgery) ಮಾಡಲಾಗಿದೆ. 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಫೋನ್ (Mobile Phone) ಅನ್ನು ಆಕೆಯಿಂದ ಹೊಟ್ಟೆಯಿಂದ ತೆಗೆಯಲಾಗಿದೆ. ಸದ್ಯ ಆಕೆಯ ಸ್ಥಿತಿ ಸ್ಥಿರವಾಗಿದೆ. ಇದನ್ನೂ ಓದಿ: 85 ವರ್ಷದ ವೃದ್ಧೆಯನ್ನು ಕೊಂದು ಅತ್ಯಾಚಾರ – ಆರೋಪಿ ಬಂಧನ

ಮೊಬೈಲ್ ನುಂಗಿದ ಕೂಡಲೇ ಆಕೆಗೆ ಹೊಟ್ಟೆನೋವು ಕಾಣಿಸಿಕೊಂಡಿದೆ. ಹೀಗಾಗಿ ಆಕೆಯನ್ನು ಗ್ವಾಲಿಯರ್‍ನ ಜೈರೋಗ್ಯ ಆಸ್ಪತ್ರೆಗೆ ದಾಖಲಿಸಿ ತಕ್ಷಣವೇ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು. ಇತ್ತ ಘಟನೆಯನ್ನರಿತ ವೈದ್ಯರೇ ಒಂದು ಬಾರಿ ದಂಗಾಗಿದ್ದಾರೆ. ದರೆ ಇಬ್ಬರ ನಡುವಿನ ಜಗಳಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

Share This Article