ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಶಾಸಕ ಅನಿಲ್ ಲಾಡ್ ಗೆ ಎಸ್‍ಐಟಿ ಶಾಕ್ !

Public TV
1 Min Read

ಬಳ್ಳಾರಿ: ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಬಳ್ಳಾರಿ ನಗರ ಶಾಸಕ ಅನಿಲ್ ಲಾಡ್ ಗೆ ಎಸ್‍ಐಟಿ ಶಾಕ್ ನೀಡಿದೆ.

ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಪ್ರಕರಣಕ್ಕೆ ಸಂಭದಿಸಿದಂತೆ ಎಸ್‍ಐಟಿ, ಶಾಸಕ ಅನಿಲ್ ಲಾಡ್ ವಿರುದ್ಧ ಎಫ್ ಐಆರ್ ದಾಖಲಿಸಿದೆ. 2010ರಿಂದ 2 ವರ್ಷಗಳ ಕಾಲ ಪರವಾನಿಗೆ ಪಡಿಯದೇ 82 ಸಾವಿರ ಮೆಟ್ರಿಕ್ ಟನ್ ಅದಿರು ಸಾಗಾಟ ಮಾಡಿದ ಪ್ರಕರಣಕ್ಕೆ ಸಂಭದಿಸಿದಂತೆ ಎಫ್‍ಐಆರ್ ದಾಖಲಿಸಲಾಗಿದೆ.

ಶಾಸಕ ಅನಿಲ್ ಲಾಡ್ ಕೆನರಾ ಮಿನರಲ್ಸ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವೇಳೆ 82,275 ಮೆಟ್ರಿಕ್ ಟನ್ ಅದಿರನ್ನು ಅಕ್ರಮವಾಗಿ ಸಾಗಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ 12.30 ಕೋಟಿ ರೂ, ನಷ್ಟವುಂಟು ಮಾಡಿದ ಆರೋಪದ ಮೇರೆಗೆ ಎಫ್‍ಐಆರ್ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರ ವಿರುದ್ಧವೇ ಇದೀಗ ಎಸ್‍ಐಟಿ ಎಫ್‍ಐಆರ್ ದಾಖಲಿಸಿರುವುದು ಸರ್ಕಾರಕ್ಕೆ ಮುಜುಗರ ತಂದಿಟ್ಟಿದೆ.

Share This Article
Leave a Comment

Leave a Reply

Your email address will not be published. Required fields are marked *