ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಮನೆಗೆ SIT

Public TV
0 Min Read

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ (HD Devegowda) ಮನೆಗೆ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ದೌಡಾಯಿಸಿದ್ದಾರೆ.

ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದೆ. ಈ ಬೆನ್ನಲ್ಲೇ ಅಧಿಕಾರಿಗಳು ಪದ್ಮನಾಭನಗರದಲ್ಲಿರುವ ದೇವೇಗೌಡರ ಮನೆಗೆ ಎಸ್‌ಐಟಿ ಅಧಿಕಾರಿಗಳ ತಂಡ ಭೇಟಿ ಕೊಟ್ಟಿದೆ.

ಮನೆ ಪರಿಶೀಲನೆ ನಡೆಸಲು ಹೋಗಿರುವ ಸುಮಾರು 5ಕ್ಕೂ ಹೆಚ್ಚು ಮಂದಿ ಅಧಿಕಾರಿಗಳು ಮನೆಯ ಹೊರಗಡೆ ನಿಂತಿದ್ದಾರೆ. ಇದನ್ನೂ ಓದಿ: ಮಹಿಳೆಯ ಅಪಹರಣ ಪ್ರಕರಣ- ಹೆಚ್‌.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Share This Article