ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆಗೆ ಇಂದು ಎಸ್‌ಐಟಿ (SIT) ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ (Dharmasthala) ತೆರಳುವ ನಿರೀಕ್ಷೆ ಇದೆ.
ಎಸ್‌ಐಟಿ ಮುಖ್ಯಸ್ಥ ಡಿಜಿಪಿ ಪ್ರಣವ್ ಮೊಹಾಂತಿ ನೇತೃತ್ವದ ಅಧಿಕಾರಿಗಳ ತಂಡವು ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿದೆ. ಬೆಳ್ತಂಗಡಿ (Belthangady) ಪೊಲೀಸ್ ಠಾಣೆಯ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಕ್ವಾಟ್ರಸ್‌ನಲ್ಲಿ ಎಸ್‌ಐಟಿ ಕಚೇರಿ ಆರಂಭಿಸಲಿದೆ. ಇದನ್ನೂ ಓದಿ: ಶಾಲಾ ಕಟ್ಟಡ ಕುಸಿದು 4 ಮಕ್ಕಳ ದಾರುಣ ಸಾವು – ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು
ಈ ಕಚೇರಿಯಿಂದಲೇ ಎಸ್‌ಐಟಿ ತನಿಖೆ ಆರಂಭಿಸಲಿದ್ದು, ಈಗಾಗಲೇ ಎಲ್ಲಾ ವ್ಯವಸ್ಥೆಗಳನ್ನ ಮಾಡಿಕೊಂಡಿದೆ. ಶವಗಳನ್ನು ಹೂತಿರುವ ಪ್ರಕರಣದೊಂದಿಗೆ ಇನ್ನಷ್ಟು ದೂರುಗಳು ಎಸ್‌ಐಟಿ ಕಚೇರಿಯಲ್ಲಿ ದಾಖಲಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ವಿಷ ಕುಡಿದು ಪತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಗಂಡನನ್ನೇ ಕೊಲೆ ಮಾಡಿಸಿದ ಗ್ರಾಪಂ ಸದಸ್ಯೆ!
ಅಲ್ಲದೇ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಂಗಳೂರಿನ ಎಸ್‌ಪಿ ಕಚೇರಿ ಆವರಣದಲ್ಲಿ ಎಸ್‌ಐಟಿ ಕಚೇರಿ ಸಿದ್ಧವಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.