ಸೀತೆ ಭಾರತದ ಮಗಳಲ್ಲ: ‘ಆದಿಪುರುಷ’ ಸಿನಿಮಾ ಡೈಲಾಗ್ ವಿರುದ್ಧ ಕಠ್ಮಂಡು ಮೇಯರ್ ಗರಂ

Public TV
1 Min Read

ಪ್ರಭಾಸ್ ನಟನೆಯ ಆದಿಪುರುಷ (Adipurusha) ಸಿನಿಮಾ ಎಲ್ಲ ಕಡೆ ತುಂಬಿದ ಪ್ರದರ್ಶನ ಕಾಣುತ್ತಿದೆ. ಜಗತ್ತಿನಾದ್ಯಂತ ರಿಲೀಸ್ ಆಗಿರುವ ಚಿತ್ರದ ಒಂದು ಡೈಲಾಗ್ ಬಗ್ಗೆ ಕಠ್ಮಂಡು (Kathmandu)  ಮೇಯರ್ ಗರಂ ಆಗಿದ್ದಾರೆ. ವಿವಾದಿತ  ಆ ಡೈಲಾಗ್ ತಗೆಯದಿದ್ದರೆ ಸಿನಿಮಾವನ್ನು ಬ್ಯಾನ್ ಮಾಡುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ, ಮೂರು ದಿನ ಗಡುವು ಕೂಡ ನೀಡಿದ್ದಾರೆ.

ಆದಿಪುರುಷ ಸಿನಿಮಾ ಮೊದಲಿನಿಂದಲೂ ವಿವಾದಕ್ಕೀಡು ಆಗುತ್ತಲೇ ಇದೆ. ಸಿನಿಮಾದ ಗ್ರಾಫಿಕ್ಸ್, ರಾವಣನ ಪಾತ್ರ, ತಿರುಪತಿಯಲ್ಲಿ ನಟಿಗೆ ಮುತ್ತಿಟ್ಟ ನಿರ್ದೇಶಕ ಹೀಗೆ ನಾನಾ ಕಾರಣಗಳಿಂದ ಸಿನಿಮಾ ಸುದ್ದಿಯಾಗುತ್ತಿದೆ. ಈ ಬಾರಿ ಡೈಲಾಗ್ ವೊಂದು ಹಲವು ಜನರ ಭಾವನೆಗೆ ಸಂಚಕಾರ ತಂದಿದೆಯಂತೆ. ಇದನ್ನೂ ಓದಿ: ಮಂಡ್ಯದಲ್ಲಿ ಟೀ ಕುಡಿದ ಅಭಿಷೇಕ್: ಥೇಟ್ ಅಪ್ಪನಂತೆ ಮಗ ಎಂದ ಫ್ಯಾನ್ಸ್

ಈ ಸಿನಿಮಾದಲ್ಲಿ ‘ಸೀತಾ ಭಾರತದ ಮಗಳು..’ ಎಂದು ಡೈಲಾಗ್ ಹೇಳಿಸಲಾಗಿದೆ. ಈ ಮಾತಿಗೆ ಕಠ್ಮುಂಡು ಮೇಯರ್ (Mayor) ಆಕ್ಷೇಪನೆಯನ್ನು ಎತ್ತಿದ್ದಾರೆ. ರಾಮಾಯಣದ ಪ್ರಕಾರ ಸೀತೆಯು ನೇಪಾಳದ ಜಾನಕ್ ಪುರದಲ್ಲಿ ಜನಿಸಿದ್ದಾರೆ. ಇಲ್ಲಿಗೆ ಶ್ರೀರಾಮ ಬಂದು ಸೀತೆಯನ್ನು ಮದುವೆ ಆಗಿರುವ ಉಲ್ಲೇಖ ಕೂಡ ಇದೆ. ಆದರೆ, ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಮತ್ತು ಸುಳ್ಳು ಹೇಳಲಾಗಿದೆ ಎಂದು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ಈಗಾಗಲೇ ನೇಪಾಳದಲ್ಲಿ ಈ ಸಿನಿಮಾದ ಸೆನ್ಸಾರ್ ಅನ್ನು ತಡೆಹಿಡಿಯಲಾಗಿದೆ. ಆದರೆ, ಉಳಿದ ಕಡೆ ಸಿನಿಮಾ ಪ್ರದರ್ಶನವಾಗುತ್ತಿದೆ. ಎಲ್ಲೆಲ್ಲಿ ಈ ಸಿನಿಮಾ ಪ್ರದರ್ಶನವಾಗುತ್ತಿದೆಯೋ ಅಲ್ಲಲ್ಲಿ, ಈ ಡೈಲಾಗ್ ತಗೆಯಲೇಬೇಕು ಎಂದು ಮೇಯರ್ ಒತ್ತಾಯಿಸಿದ್ದಾರೆ. ಸಿನಿಮಾವನ್ನು ನೇಪಾಳದಲ್ಲಿ ಬ್ಯಾನ್ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

Share This Article