‘ಅಮರನ್‌’ ಟ್ರೈಲರ್ ರಿಲೀಸ್- ಮೇಜರ್ ಮುಕುಂದ್ ವರದರಾಜನ್ ಜೀವನಗಾಥೆಯಲ್ಲಿ ಶಿವಕಾರ್ತಿಕೇಯನ್

Public TV
1 Min Read

ಕಾಲಿವುಡ್ ನಟ ಶಿವಕಾರ್ತಿಕೇಯನ್ (Sivakarthikeyan) ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ‘ಅಮರನ್’ (Amaran) ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಅಮರನ್, ಭಯೋತ್ಪಾದಕ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಮೇಜರ್ ಮುಕುಂದ್ ವರದರಾಜನ್ ಜೀವನ ಚರಿತ್ರೆಯಾಗಿದೆ. ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಎಮೋಷನ್ ಜೊತೆಗೆ ಆ್ಯಕ್ಷನ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೈಲರ್ ಕಟ್ ಮಾಡಲಾಗಿದೆ. ಇದನ್ನೂ ಓದಿ:ಜೈಲು ನಿಯಮ ಉಲ್ಲಂಘನೆ – ದರ್ಶನ್ ಒಳಿತಿಗೆ ಪತ್ನಿ ಕಟ್ಟಿದ್ದ ದಾರ ತೆಗೆಸುವ ಸಾಧ್ಯತೆ

 

View this post on Instagram

 

A post shared by Kamal Haasan (@ikamalhaasan)

ಸೇನಾ ರಜೆಯಲ್ಲಿ ಮನೆಗೆ ಬಂದಿರುವ ಯೋಧ ತನ್ನ ಮಗಳೊಂದಿಗೆ ಇರುವ ಕ್ಷಣ, ಮಗಳಿಗೆ ಒಂದು ಪ್ರೀತಿಯ ಅಪ್ಪುಗೆ ಕೊಟ್ಟು ಮತ್ತೆ ದೇಶ ಸೇವೆಗೆ ಹೋಗುವ ದೃಶ್ಯ, ನಮ್ಮನ್ನು ಬಿಟ್ಟು ನೀನು ದೂರ ಆಗಿದ್ರೂ ಪರವಾಗಿಲ್ಲ, ಸೇಫ್ ಆಗಿರು ಎನ್ನುವ ಪತ್ನಿ ಡೈಲಾಗ್ ನೋಡುಗರಿಗೆ ಕಾಡುತ್ತದೆ. ಶಿವಕಾರ್ತಿಕೇಯನ್ ಮೇಜರ್ ಮುಕುಂದ್ ವರದರಾಜನ್ ಪಾತ್ರದಲ್ಲಿ ಜೀವಿಸಿದ್ದಾರೆ. ಸಾಯಿ ಪಲ್ಲವಿ (Sai Pallavi) ಅವರ ಪತ್ನಿ ಇಂದೂ ರೆಬೆಕಾ ವರ್ಗೀಸ್ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:ಪ್ರೀತಿಸಿ ಮದುವೆಯಾಗೋಕೆ ನನಗೆ ಸಮಯವಿಲ್ಲ: ಸುನೈನಾ

ಚಿತ್ರವನ್ನು ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶಿಸಿದ್ದಾರೆ. ಭುವನ್ ಅರೋರಾ, ರಾಹುಲ್ ಬೋಸ್ ಮುಂತಾದವರು ನಟಿಸಿದ್ದಾರೆ. ಇಂಡಿಯಾಸ್ ಮೋಸ್ಟ್ ಫಿಯರ್‌ಲೆಸ್ ಪುಸ್ತಕದಲ್ಲಿ ಶಿವ್ ಅರೂರ್ ಮತ್ತು ರಾಹುಲ್ ಸಿಂಗ್ ಅವರು ಮೇಜರ್ ವರದರಾಜನ್ ಬಗ್ಗೆ ಸಾಕಷ್ಟು ಬರೆದಿದ್ದಾರೆ. ಅದರಲ್ಲಿನ ಅಂಶಗಳನ್ನು ತೆಗೆದುಕೊಂಡು ನಿರ್ದೇಶಕ ರಾಜ್‌ಕುಮಾರ್ ಪೆರಿಯಸಾಮಿ ಕಥೆ ಬರೆದು, ನಿರ್ದೇಶಿಸಿದ್ದಾರೆ.

ಜಿ.ವಿ.ಪ್ರಕಾಶ್ ಕುಮಾರ್ ಅವರ ಸಂಗೀತ ಸಂಯೋಜನೆ, ಸಿ.ಎಚ್.ಸಾಯಿ ಅವರ ಛಾಯಾಗ್ರಹಣ ಮತ್ತು ಆರ್. ಕಲೈವನನ್ ಅವರ ಸಂಕಲನವಿರುವ ಸಿನಿಮಾವನ್ನು ಕಮಲ್ ಹಾಸನ್ ಅವರ ರಾಜ್ ಕಮಲ್ ಫಿಲ್ಮ್ಸ್ಇಂಟರ್ನ್ಯಾಷನಲ್ ಜಂಟಿಯಾಗಿ ನಿರ್ಮಾಣ ಮಾಡಿದೆ.

Share This Article