ಕತಾರ್‌ನಲ್ಲಿ ಸೇನಾ ಹೆಲಿಕಾಪ್ಟರ್ ಪತನ – 6 ಮಂದಿ ಸಾವು, ಓರ್ವ ನಾಪತ್ತೆ

1 Min Read

ಕತಾರ್: ತಾಂತ್ರಿಕ ದೋಷದಿಂದ ಕತಾರ್ (Qatar) ರಕ್ಷಣಾ ಸಚಿವಾಲಯಕ್ಕೆ ಸೇರಿದ ಹೆಲಿಕಾಪ್ಟರ್ ಪತನಗೊಂಡು (Helicopter Crash) 6 ಮಂದಿ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿರುವ ಘಟನೆ ಕತಾರ್‌ನ ಪ್ರಾದೇಶಿಕ ಜಲಪ್ರದೇಶದಲ್ಲಿ ನಡೆದಿದೆ.

ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು, ಈ ಕುರಿತು ಕತಾರ್ ರಕ್ಷಣಾ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ. ಹೆಲಿಕಾಪ್ಟರ್‌ನಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಉಪ ಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ: ಡಿಕೆಶಿ

ನಾಪತ್ತೆಯಾಗಿರುವ ಓರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಘಟನೆ ಕುರಿತು ಆಂತರಿಕ ಸಚಿವಾಲಯ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದೆ. ಇದನ್ನೂ ಓದಿ: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋಗಳು AI ಅಲ್ಲ, ಅಸಲಿ ಅಂತ SITಯಿಂದ ರಿಪೋರ್ಟ್

Share This Article