ಪುಣೆ-ಬೆಂಗಳೂರು ಹೆದ್ದಾರಿ; ನಿಯಂತ್ರಣ ತಪ್ಪಿ ವಾಹನಗಳಿಗೆ ಕಂಟೇನರ್‌ ಟ್ರಕ್‌ ಡಿಕ್ಕಿ – 6 ಮಂದಿ ಸಾವು

Public TV
0 Min Read

ಮುಂಬೈ: ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆ ಬಳಿ ಕಂಟೇನರ್ ಟ್ರಕ್ ನಿಯಂತ್ರಣ ತಪ್ಪಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ.

ಟ್ರಕ್‌ ಡಿಕ್ಕಿ ಹೊಡೆದ ಬೆನ್ನಲ್ಲೇ 2-3 ಭಾರೀ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಲಯ 3 ಪುಣೆ ನಗರ ಪೊಲೀಸ್ ಡಿಸಿಪಿ ಸಂಭಾಜಿ ಕದಮ್ ತಿಳಿಸಿದ್ದಾರೆ.

ಅಪಘಾತದಲ್ಲಿ ಎಂಟರಿಂದ 10 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಹೇಗೆ ಸಂಭವಿಸಿತು ಎಂದು ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಗ್ನಿಶಾಮಕ ದಳವು ನೀರಿನ ಟ್ಯಾಂಕರ್‌ಗಳ ಮೂಲಕ ಬೆಂಕಿಯನ್ನು ನಂದಿಸುವ ಕಾರ್ಯ ನಡೆಸಿವೆ. ಅಪಘಾತದಿಂದಾಗಿ ಜನನಿಬಿಡ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

Share This Article