ಹಾಸನ| ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 8 ಮಂದಿ ಸ್ಥಳದಲ್ಲೇ ಸಾವು

Public TV
0 Min Read

– ದುರಂತ ಸಾವು ಕಂಡ ಐವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು

ಹಾಸನ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ದುರಂತ ಸಂಭವಿಸಿದೆ. ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು 6 ಮಂದಿ ಮೃತಪಟ್ಟಿದ್ದಾರೆ.

ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ದೌಡಾಯಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದುರಂತ ಸಾವು ಕಂಡಿದ್ದಾರೆ. ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇವರು ವಿದ್ಯಾಭ್ಯಾಸ ಮಾಡುತ್ತಿದ್ದರು.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ. ಹಾಸನದಿಂದ ಹೊಳೆನರಸೀಪುರದ ಕಡೆಗೆ ಕಂಟೇನರ್ ವಾಹನ ಹೋಗುತ್ತಿತ್ತು. ಈ ವೇಳೆ ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ವಾಹನ ನುಗ್ಗಿದೆ.

ಚಾಲಕ ಭುವನೇಶ್‌ಗೂ ಗಂಭೀರ ಗಾಯಗಳಾಗಿವೆ. ಹೊಳೆನರಸೀಪುರ ತಾಲ್ಲೂಕಿನ ಕಟ್ಟೆಬೆಳಗುಲಿಯ ಚಾಲಕ ಭುವನೇಶ್‌ನನ್ನು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

Share This Article