ಶಿವಮೊಗ್ಗ: ಹೊಸನಗರ (Hosanagar) ತಾಲೂಕಿನ ಬಿಳ್ಕೋಡಿ ಗ್ರಾಮದ 6 ಮಂದಿಗೆ ಮಂಗನ ಕಾಯಿಲೆ (KFD) ಕಾಣಿಸಿಕೊಂಡಿದೆ.
ಕಳೆದ ವಾರ ಗ್ರಾಮದ 55 ವರ್ಷದ ಮಹಿಳೆಯಲ್ಲಿ ಕೆಎಫ್‌ಡಿ ಕಾಣಿಸಿಕೊಂಡಿತ್ತು. ಆರೋಗ್ಯ ಇಲಾಖೆ ಅದೇ ಊರಿನ ಮತ್ತಷ್ಟು ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಇನ್ನೂ ಐವರಲ್ಲಿ ಪಾಸಿಟಿವ್ ಬಂದಿದೆ. ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮಲೆನಾಡಿಗರನ್ನು ಬಿಟ್ಟು ಬಿಡದೇ ಕಾಡುತ್ತಿರುವ ‘ಮಂಗನ ಕಾಯಿಲೆ’
ಜನವರಿ ಆರಂಭದಲ್ಲಿ ಹೆಚ್ಚಿನ ಪಾಸಿಟಿವ್ ಪ್ರಕರಣಗಳು ಕಂಡುಬರುತ್ತಿದ್ದವು. ಈ ಬಾರಿ ನವೆಂಬರ್‌ನಿಂದಲೇ ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ. ಇನ್ನೂ ಮಂಗನ ಕಾಯಿಲೆಗೆ ಲಸಿಕೆ ನಿಲ್ಲಿಸಿ ಮೂರು ವರ್ಷ ಕಳೆದಿದ್ದು ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ. ಇನ್ನೂ ಎಷ್ಟೋ ಕಡೆ ಉಣುಗು, ಸತ್ತ ಮಂಗಗಳಲ್ಲಿ ಪಾಸಿಟಿವ್ ಕಂಡುಬರದೇ ಇದ್ದರೂ ಮನುಷ್ಯರಿಗೆ ಪಾಸಿಟಿವ್ ಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಗಡಿಭಾಗದ ಕೊಪ್ಪ ತಾಲೂಕಿನ ಕಮ್ಮರಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಪಾಸಿಟಿವ್ ಬಂದಿದೆ. ಇದು ಚಿಕ್ಕಮಗಳೂರು ಜಿಲ್ಲೆಯ ಮೊದಲ ಪ್ರಕರಣವಾಗಿದೆ.

