ಮಂತ್ರಾಲಯಕ್ಕೆ ಹೊರಟಿದ್ದ ಬಸ್‍ನಲ್ಲಿ ದಟ್ಟ ಹೊಗೆ – ಆತಂಕಕ್ಕೊಳಗಾದ ರಾಯರ ಭಕ್ತರು

Public TV
1 Min Read

ರಾಯಚೂರು: ನಗರದಿಂದ (Raichur) ಮಂತ್ರಾಲಯಕ್ಕೆ (Mantralayam) ಹೊರಟಿದ್ದ ಸಾರಿಗೆ ಬಸ್‍ನಲ್ಲಿ (Bus) ಇದ್ದಕ್ಕಿದ್ದಂತೆ ಹೊಗೆ ಆವರಿಸಿ ಪ್ರಯಾಣಿಕರು ಆತಂಕಕ್ಕೆ ಒಳಗಾದ ಘಟನೆ ಆಂಧ್ರಪ್ರದೇಶದ ಮಾಧಾವರಂ ಬಳಿ ನಡೆದಿದೆ.

ರಾಯರ ಆರಾಧನಾ ಮಹೋತ್ಸವ ಹಿನ್ನೆಲೆಯಲ್ಲಿ ಬಹುತೇಕ ಪ್ರಯಾಣಿಕರು ಮಂತ್ರಾಲಯಕ್ಕೆ ಹೊರಟಿದ್ದರು. ಈ ವೇಳೆ ಮಾಧಾವರಂ ಬಳಿ ಮಾರ್ಗ ಮಧ್ಯೆ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‍ನಿಂದ ದಟ್ಟ ಹೊಗೆ ಆವರಿಸಿದೆ. ಇದರಿಂದ ಪ್ರಯಾಣಿಕರು ಗಾಬರಿಗೊಳಗಾಗಿದ್ದಾರೆ. ಬಳಿಕ ಸಮೀಪದ ಮನೆಯೊಂದರಿಂದ ನೀರನ್ನು ತಂದು ರೇಡಿಯೇಟರ್‌ಗೆ ಸುರಿದ ಬಳಿಕ ಹೊಗೆ ನಿಯಂತ್ರಣಕ್ಕೆ ಬಂದಿದೆ. ಇದನ್ನೂ ಓದಿ: ನನ್ನ ಕೆಲಸದ ಟೈಂ ಮುಗಿದಿದೆ ಅಂದಿದ್ದಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಥಳಿತ!

ಘಟನೆಗೆ ಕಾರಣ ತಿಳಿದು ಬಂದಿಲ್ಲ. ಆದರೆ ಪ್ರಯಾಣಿಕರು, ಹಳೆಯದಾದ ಬಸ್‍ಗಳ ಅಸಮರ್ಪಕ ನಿರ್ವಹಣೆಯಿಂದ ಘಟನೆ ನಡೆದಿದೆ. ಕೂಡಲೇ ಹಳೆ ಬಸ್‍ಗಳನ್ನ ಬದಲಿಸಬೇಕು. ಬಸ್‍ಗಳ ನಿರ್ವಹಣೆ ಸರಿಯಾಗಿ ಮಾಡಬೇಕು ಎಂದು ದೂರಿದ್ದಾರೆ.

ಘಟನೆಯಿಂದ ಯಾರಿಗೂ ತೊಂದರೆಯಾಗಿಲ್ಲ. ಚಾಲಕ ತಕ್ಷಣ ನೀರು ತಂದು ಹಾಕಿರುವುದರಿಂದ ಅನಾಹುತ ತಪ್ಪಿದೆ. ಚಾಲಕನ ಸಮಯ ಪ್ರಜ್ಞೆಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇನ್ನೊಬ್ಬನ ಮೇಲೆ ದ್ವೇಷ ತೀರಿಸಿಕೊಳ್ಳಲು ಆತ್ಮೀಯ ಸ್ನೇಹಿತನನ್ನೇ ಕೊಂದ ಕಿರಾತಕ!

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್