– ದಕ್ಷಿಣ ಕನ್ನಡ ಎಸ್‌ಪಿಗೆ ದೂರು ಸಲ್ಲಿಸಿದ ಸಾಮಾಜಿಕ ಹೋರಾಟಗಾರ
ಮಂಗಳೂರು: ಸೌಜನ್ಯ ಕೊಲೆ ಮಾಡಿದ್ದು ಆಕೆಯ ಮಾವ ವಿಠಲ ಗೌಡ (Vittal Gowda) ಎಂದು ಮೈಸೂರಿನ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ (Snehamayi Krishna) ಆರೋಪಿಸಿದ್ದಾರೆ. ಈ ಕುರಿತು ದಕ್ಷಿಣ ಕನ್ನಡ ಎಸ್‌ಪಿ ಡಾ.ಅರುಣ್ ಕುಮಾರ್‌ಗೆ ದೂರು ಅರ್ಜಿ ಸಲ್ಲಿಸಿದ್ದಾರೆ.
ಸೌಜನ್ಯಳ ಮೇಲೆ ಸೋದರಮಾವ ವಿಠಲ ಗೌಡಗೆ ಕೆಟ್ಟ ದೃಷ್ಟಿ ಇತ್ತು. ಆಕೆಯನ್ನು ಬಳಸಿಕೊಳ್ಳಲು ಬಹಳ ಸಮಯದಿಂದ ಹವಣಿಸುತ್ತಿದ್ದ. ಒಪ್ಪದೇ ಇದ್ದಂತ ಸಂದರ್ಭದಲ್ಲಿ ಆಕೆ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಂಗ್ಲೆಗುಡ್ಡಕ್ಕೆ ಸೌಜನ್ಯ ಮಾವ ವಿಠಲಗೌಡನ ಕರೆದೊಯ್ದ SIT
ಸಾಂದರ್ಭಿಕ ಸಾಕ್ಷಿಗಳನ್ನು ಇಟ್ಟುಕೊಂಡು ದಕ್ಷಿಣ ಕನ್ನಡ ಎಸ್ಪಿ ತನಿಖೆ ನಡೆಸಬೇಕೆಂದು ಸ್ನೇಹಮಯಿ ಕೃಷ್ಣ ದೂರಿನ ಮೂಲಕ ಮಂಪರು ಪರೀಕ್ಷೆ ಮಾಡಲು ಆಗ್ರಹಿಸಿದ್ದಾರೆ.
ಸೌಜನ್ಯ ತಾಯಿ ಕುಸುಮಾವತಿಗೂ ಸಹೋದರ ವಿಠಲ ಗೌಡನ ಮೇಲೆ ಸಂಶಯವಿತ್ತು. ಸೌಜನ್ಯ ಮೃತದೇಹವನ್ನು ನೋಡಲು ಕುಸುಮಾವತಿ ಹೋಗಿರಲಿಲ್ಲ. ಸಂತೋಷ್ ರಾವ್ ಅವರನ್ನು ಈ ಕೃತ್ಯಕ್ಕೆ ಬಳಸಿಕೊಂಡಿರಬಹುದು. ಈ ಬಗ್ಗೆ ನಾನು ಬಹಳ ದಿನಗಳಿಂದ ಮಾಹಿತಿಗಳನ್ನು ಕಲೆ ಹಾಕುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೌಜನ್ಯ ಕೇಸ್| ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಉದಯ್ ಜೈನ್ ಪತ್ರ
ಸಂಪೂರ್ಣ ಮರುತನಿಖೆ ನಡೆಸಿ ಆರೋಪಿಗೆ ಶಿಕ್ಷೆ ವಿಧಿಸಬೇಕು. ವಿಠಲ ಗೌಡನ ಮಂಪರು ಪರೀಕ್ಷೆ ಮಾಡಬೇಕು. ಮಂಪರು ಪರೀಕ್ಷೆಯಿಂದ ಸತ್ಯ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.