ಸಿಎಂ ಅಧಿಕೃತ ಎಕ್ಸ್ ಖಾತೆಯಲ್ಲಿ ಮೋದಿ ನಿಂದನೆ ಆರೋಪ – ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ

Public TV
1 Min Read

– ಸಿಎಂ ಎಕ್ಸ್ ಖಾತೆ ವಂಧಿಮಾಗದರ ಮುಖವಾಣಿ
– ಕಾಂಗ್ರೆಸ್ ಕಾರ್ಯಕರ್ತರು ಖಾತೆ ನಿರ್ವಹಣೆ ಮಾಡುತ್ತಿದ್ದಾರಾ?

ಬೆಂಗಳೂರು: ಸಿಎಂ ಆಫ್ ಕರ್ನಾಟಕ ಎಕ್ಸ್ ಖಾತೆಯಲ್ಲಿ ಪ್ರಧಾನಿ ಮೋದಿಯವರನ್ನು (Narendra Modi) ನಿಂದಿಸಲಾಗಿದೆ ಎಂದು ಪರಿಷತ್ ಸದಸ್ಯ ಸಿ.ಟಿ ರವಿ (C.T Ravi) ಕಿಡಿಕಾರಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಆಫ್ ಕರ್ನಾಟಕ ಎಂಬ ಎಕ್ಸ್ ಖಾತೆ ಸಂವಿಧಾನಾತ್ಮಕವಾದದ್ದು. ಮುಖ್ಯಮಂತ್ರಿಯಾದವರ ದೈನಂದಿನ ಸರ್ಕಾರದ ಕಾರ್ಯಚಟುವಟಿಕೆಗಳು ಜನಸಾಮಾನ್ಯರಿಗೆ ನೇರವಾಗಿ ತಲುಪಬೇಕು ಎಂಬ ನಿಟ್ಟಿನಲ್ಲಿ ವಾರ್ತಾ ಇಲಾಖೆ ಸೃಷ್ಟಿಸಿದ ಖಾತೆಯಾಗಿದೆ. ಆದರೆ ಈಗ ಏನಾಗಿದೆ ನೋಡಿ, ಪ್ರಧಾನಿ ಮೋದಿ ಹಾಗೂ ರಾಜ್ಯಪಾಲರನ್ನು ನಿಂದಿಸಲು ಈ ಖಾತೆಯ ಬಳಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇಷ್ಟೇ ಅಲ್ಲದೇ ಆ ಎಕ್ಸ್ ಖಾತೆಯನ್ನು, ಸಿಎಂ ಸಿದ್ದರಾಮಯ್ಯ ಅವರ ವಂಧಿಮಾಗದರು ಕಾಂಗ್ರೆಸ್ ಮುಖವಾಣಿಯನ್ನಾಗಿ ಪರಿವರ್ತಿಸಿಕೊಂಡಿದ್ದಾರೆ. ಅಷ್ಟಕ್ಕೂ ಈ ಸಾಮಾಜಿಕ ಜಾಲತಾಣದ ಖಾತೆಯನ್ನು ವಾರ್ತಾ ಇಲಾಖೆಯ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೊ? ಅಥವಾ ಕೆಳಮಟ್ಟದ ಕಾಂಗ್ರೆಸ್ ಕಾರ್ಯಕರ್ತರೊ? ಎಂದು ಪ್ರಶ್ನಿಸಿದ್ದಾರೆ.

ಈ ಪ್ರಶ್ನೆಗೆ ಕಾಂಗ್ರೆಸ್ ಉತ್ತರಿಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಇದನ್ನು ಗಮನಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Share This Article