ಆಸ್ಟ್ರೇಲಿಯಾದಲ್ಲಿ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್

1 Min Read

ಕ್ಯಾನ್ಬೆರಾ: ಆಸ್ಟ್ರೇಲಿಯಾದಲ್ಲಿ (Australia) 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸೋಷಿಯಲ್ ಮೀಡಿಯಾ ಬ್ಯಾನ್ (Social Media Ban) ಮಾಡುವ ಕಾನೂನು ಇಂದಿನಿಂದ ಜಾರಿಗೆ ಬಂದಿದೆ.

ಈ ಮೂಲಕ, ಮಕ್ಕಳ ಸಾಮಾಜಿಕ ಜಾಲತಾಣಗಳ ಬಳಕೆ ಸಂಬಂಧ ಸಮಗ್ರ ಕಾನೂನು ರೂಪಿಸಿದ ಮೊದಲ ದೇಶವಾಗಿದೆ. ಈ ಕಾನೂನಿನ ಮೂಲಕ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಥ್ರೆಡ್ಸ್, ಸ್ಮ್ಯಾಪ್‌ಚಾಟ್, ಟಿಕ್‌ಟಾಕ್‌ ನಂತಹ ಸಾಮಾಜಿಕ ಜಾಲತಾಣಗಳ ವೇದಿಕೆಗಳು ಬಳಕೆದಾರರ ವಯಸ್ಸನ್ನ ಖಚಿತಪಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಇದನ್ನೂ ಓದಿ: ಲಂಚ ತೆಗೆದುಕೊಂಡಿದ್ದಕ್ಕೆ ಮಾಜಿ ಜನರಲ್‌ ಮ್ಯಾನೇಜರ್‌ನ ಗಲ್ಲಿಗೇರಿಸಿದ ಚೀನಾ

ಇಲ್ಲವಾದಲ್ಲಿ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗಿದೆ. ಮಕ್ಕಳ ಸುರಕ್ಷತೆ ಖಾತರಿಪಡಿಸಲು ಸಾಮಾಜಿಕ ಹೊಣೆಗಾರಿಕೆ ನಿಗದಿಪಡಿಸುವ ಉದ್ದೇಶ ಈ ಕಾನೂನಿನಲ್ಲಿದೆ ಅಂತ ಆಸ್ಟ್ರೇಲಿಯಾ ಸರ್ಕಾರ ಹೇಳಿದೆ. ಇದನ್ನೂ ಓದಿ: ಅಮೆರಿಕ ಸೋಷಿಯಲ್‌ ಮೀಡಿಯಾ ಹೊಸ ರೂಲ್ಸ್‌ – ಭಾರತೀಯರಿಗೆ H-1B ವೀಸಾ ನೇಮಕಾತಿ ಮುಂದೂಡಿಕೆ

Share This Article