ಹಿಂದೂಗಳಂತೆ ಮುಸಲ್ಮಾನರೂ ಪೌರಕಾರ್ಮಿಕರಾಗಿ ದುಡಿಯಲಿ: ಸೊಗಡು ಶಿವಣ್ಣ

Public TV
2 Min Read

ತುಮಕೂರು: ಹಿಂದೂ ಪೌರಕಾರ್ಮಿಕರು ಮುಸಲ್ಮಾನರ ಅಂಗಡಿ, ಮನೆ ಮುಂದೆ ಕಸ ಗುಡಿಸುತ್ತಾರೆ. ಅವರ ಶೌಚಾಲಯವನ್ನು ಕ್ಲೀನ್ ಮಾಡುತ್ತಾರೆ. ಆದರೆ ಮುಸಲ್ಮಾನರೇಕೆ ಪೌರಕಾರ್ಮಿಕರ ಕೆಲಸ ಮಾಡಲ್ಲ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾನತೆ ಅಂದ ಮೇಲೆ ಎಲ್ಲವೂ ಒಂದೇ ಆಗಬೇಕು. ಹಾಗಾದರೆ ಮುಸಲ್ಮಾನರೂ ಕೂಡ ಪೌರಕಾರ್ಮಿಕರಾಗಿ ಸೇರಿ ಹಿಂದೂಗಳ ಮನೆ ಮುಂದೆ ಕಸ ಗುಡಿಸಿ ಔದಾರ್ಯ ತೊರಲಿ ಎಂದು ಸವಾಲು ಹಾಕಿದರು.

ಮಹಾರಾಷ್ಟ್ರದ ಆದಿತ್ಯ ಠಾಕ್ರೆ ಹೇಳಿರುವುದು ನೂರಕ್ಕೆ ನೂರು ಸತ್ಯವಾಗಿದೆ. ದೇಶದಲ್ಲಿ ಮೈಕ್‍ಗಳ ಹಾವಳಿ ವಿಪರೀತವಾಗಿದೆ. ನಾನು ಮಾಲಿನ್ಯ ಸಚಿವನಾಗಿದ್ದಾಗ ಕಾನೂನಿಗೆ ಗೌರವ ಕೊಡುವಂತೆ ಮಸೀದಿಗಳ ಮೇಲಿನ ಮೈಕ್‍ಗಳನ್ನು ತೆಗೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೆ. ಈ ಮೈಕ್‍ಗಳ ಶಬ್ಧದಿಂದಾಗಿ ಹಾರ್ಟ್ ಅಟ್ಯಾಕ್ ಮತ್ತು ವಿದ್ಯಾರ್ಥಿಗಳ ಓದಿಗೆ ತೊಡಕು ಆಗುತ್ತಿದೆ. ತುಮಕೂರು ನಗರದ ಸದಾಶಿವನಗರ, ಜಯಪುರದಲ್ಲಿ ಆಜನ್ ಕಾಟದಿಂದ ಹಿಂದೂಗಳು ಮನೆ ತೊರೆದಿದ್ದಾರೆ ಎಂದರು. ಇದನ್ನೂ ಓದಿ: ಸ್ಥಳೀಯ ಉಗ್ರರನ್ನು ಮುಂದಿಟ್ಟುಕೊಂಡು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕರ ದಾಳಿ: ಉನ್ನತ ಅಧಿಕಾರಿ

ತುಮಕೂರಿನ ಕೆಲ ಬಡಾವಣೆಗಳಲ್ಲಿ ಮನೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಹಿಂದೂಗಳ ಸ್ಮಶಾನಕ್ಕೆ ಹೋಗಿ ನಮ್ಮ ಶಾಸ್ತ್ರ ವಿಧಿವಿಧಾನ ಮಾಡುವ ವೇಳೆ ಆಜನ್‍ನಿಂದ ನಮಗೆ ತೊಂದರೆ ಆಗುತ್ತಿದ್ದು, ಬಿಜೆಪಿಯವರು ಕೇವಲ ಹತ್ತೇ ವರ್ಷ ಆಳ್ವಿಕೆ ನಡೆಸಿದ್ದಾರೆ. ಇದರೆ ಹಿಂದೆ 70 ವರ್ಷಗಳು ಆಳಿದವರು ಪಾಪಿಗಳು. ಅವರು ಸಮಾಜದಲ್ಲಿ ಜಾತಿ ವಿಂಗಡಣೆ ಮಾಡುತ್ತಿದ್ದಾರೆ ಎಮದು ವಾಗ್ದಾಳಿ ನಡೆಸಿದರು.

SIDDARAMAIAH

ಕುಮಾರಸ್ವಾಮಿ ಹಿಜಬ್ ಹಿಡಿದುಕೊಂಡಿದ್ದಾರೆ. ಸಿದ್ದರಾಮಯ್ಯ ಹಲಾಲ್ ಹಿಡ್ಕೊಂಡಿದ್ದಾರೆ. ಇನ್ನೊಬ್ಬರು ಮಾವಿನಹಣ್ಣು ಹಿಡ್ಕೊಂಡಿದ್ದಾರೆ. ಮೊದಲು ಶಬ್ಧ ಮಾಲಿನ್ಯ ತಡೆಗಟ್ಟಲಿ ದೇವಸ್ಥಾನದಲ್ಲೂ ಮೈಕ್‍ಗಳನ್ನು ಶಬ್ಧ ಮಾಲಿನ್ಯ ಆಗದಂತೆ ಹಾಕಿಕೊಳ್ಳಲಿ. ಸುಪ್ರೀಂ ಆದೇಶ ಯತಾವತ್ತು ಪಾಲನೆ ಆಗಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಬೇರೆ ಪಕ್ಷಗಳು ಹಣಬಲದಲ್ಲಿ ಶ್ರೀಮಂತ, AAP ವಿಚಾರ ಧಾರೆಯಲ್ಲಿ ಶ್ರೀಮಂತ: ಭಾಸ್ಕರ್ ರಾವ್

ಇದು ಪಾಕಿಸ್ತಾನ ಅಲ್ಲ, ಹಿಂದೂ ರಾಷ್ಟ್ರ. ಇಲ್ಲಿ ಹಿಂದೂ ಕಾನೂನು ಇರಬೇಕು. ಸರ್ಕಾರಕ್ಕೆ ಈಗಲೂ ಮನವಿ ಮಾಡಿಕೊಳ್ಳುತ್ತೇನೆ. ಕಾಂಗ್ರೆಸ್ ಮತ್ತು ಜೆಡಿಎಸ್ ದೇಶ ವಿಭಜನೆ ಮಾಡೋಕೆ ಹೊರಟಿದ್ದಾರೆ. ಮಾವಿನಹಣ್ಣನ್ನು ನಮ್ಮವರು ಬೆಳೆಯೋದು ಮುಸಲ್ಮಾನರು ಅದನ್ನ ಮಾರಿ ಲಾಭ ಮಾಡಿಕೊಳ್ಳುವುದು ಏಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾವಿನ ಹಣ್ಣನ್ನೂ ಕೂಡ ಇವರು ಮಾರಬಾರದು. ಅದನ್ನು ಬೆಳೆದ ರೈತರು ನಮ್ಮವರು ಮಾರಲಿ ಮುಸಲ್ಮಾನರು ಮಾವಿನಹಣ್ಣನ್ನ ಖರೀದಿ ಮಾಡದೆ ಇದ್ದರೇ, ರೈತರು ಕಂಗಾಲು ಆಗಲ್ಲ. ರೈತರಿಂದ ನಮ್ಮವರೇ ಖರೀದಿ ಮಾಡಿ, ಅದನ್ನು ಮಾರಲಿ ಎಂದರು.

ಹೈಕೋರ್ಟ್ ತೀರ್ಪಿನ ವಿರುದ್ಧ ಇವರ ಅಂಗಡಿ ಬಂದ್ ಮಾಡಿದರು. ಇದರಿಂದ ನಮ್ಮವರಿಗೂ ಲಾಸ್ ಆಗಿದೆ. ರೇಷ್ಮೆ ಮಾರ್ಕೆಟ್‍ಗಳೂ ಬಂದ್ ಆಗೋದ್ದವು, ಇದರಿಂದ ನಮ್ಮವರಿಗೆ ತುಂಬಾ ತೊಂದರೆ ಆಗಿದೆ. ರೇಷ್ಮೆ ಗೂಡುಗಳು ನಾಶ ಆದವು ಎಂದು ಬೇಸರ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *