ಹಿಂದುಳಿದ ವರ್ಗದ ನಾನು ಎರಡನೇ ಬಾರಿ ಸಿಎಂ ಆಗಿದ್ದನ್ನು ಸಹಿಸಲು ಕೆಲವರಿಗೆ ಆಗ್ತಿಲ್ಲ: ಸಿದ್ದರಾಮಯ್ಯ

Public TV
1 Min Read

– ಮುಡಾ ಗಬ್ಬೆದ್ದು ನಾರುತ್ತಿದೆ, ಅದನ್ನು ಕ್ಲೀನ್‌ ಮಾಡುತ್ತೇನೆ ಎಂದ ಸಿಎಂ

ಮೈಸೂರು: ಒಬ್ಬ ಹಿಂದುಳಿದ ವರ್ಗದ ಸಿದ್ದರಾಮಯ್ಯ (Siddaramaiah) ಎರಡನೇ ಬಾರಿ ಸಿಎಂ ಆಗಿದ್ದನ್ನು ಸಹಿಸಲು ಕೆಲವರಿಗೆ ಆಗುತ್ತಿಲ್ಲ ಎಂದು ವಿಪಕ್ಷ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಹೊಟ್ಟೆಕಿಚ್ಚಿನಿಂದ ಕೆಲವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನನ್ನ ಮೇಲೆ ಆರೋಪ ಮಾಡಲು ಬೇರೆ ಏನೂ ಇಲ್ಲ. ಹೀಗಾಗಿ ಕಾನೂನಾತ್ಮಕವಾಗಿ ನಡೆದಿರುವ ವಿಚಾರವನ್ನ ಅಕ್ರಮ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾನು ಹೆದರುತ್ತೀನಾ? ಇದರಿಂದ ನನ್ನನ್ನು ಹೆದರಿಸಲು ಸಾಧ್ಯನಾ ಎಂದು ಸಿಎಂ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಇಷ್ಟಾರ್ಥ ಸಿದ್ಧಿಗೆ ಅಜ್ಜಯ್ಯನ ಮೊರೆ ಹೋದ ಡಿಕೆಶಿ

ಮುಡಾ ಗೆಬ್ಬೆದ್ದು ಹೋಗಿದೆ. ಅದನ್ನ ಕ್ಲೀನ್ ಮಾಡುವ ಕೆಲಸ ಮಾಡುತ್ತೇನೆ. ಮುಡಾ ಹಗರಣದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ‌. ತನಿಖಾ ವರದಿ ಬಂದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇನೆ. ನಮ್ಮ ಕಾಲದಲ್ಲೂ ತಪ್ಪುಗಳು ಆಗಿದೆ. ಬಿಜೆಪಿ ಕಾಲದಲ್ಲೇ ಹೆಚ್ಚು ತಪ್ಪಾಗಿರುವುದು. ಅದನ್ನ ಸರಿಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ನಮ್ಮ ಪತ್ನಿಗೆ ಸೈಟ್ ಕೊಟ್ಟಿರುವ ವಿಚಾರ ಇಟ್ಟುಕೊಂಡು ಬೇರೆ ಅಕ್ರಮ ಮಾಡಲು ಸಾಧ್ಯವಿಲ್ಲ. ನಮ್ಮದು ಅಕ್ರಮವೇ ಅಲ್ಲ. ಆ ಪ್ರಕರಣವೇ ಬೇರೆ, ಈಗ ನಡೆದಿರುವ ಪ್ರಕರಣಗಳೇ ಬೇರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಅಕ್ರಮ ಆಸ್ತಿಗಳಿಕೆ ಆರೋಪ – ಹಾರೋಹಳ್ಳಿ ತಹಶೀಲ್ದಾರ್ ಮನೆ ಮೇಲೆ ಲೋಕಾ ದಾಳಿ

ಮುಡಾ ಹಗರಣದ ವಿರುದ್ಧ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ಅವರು ರಾಜಕೀಯ ಕಾರಣಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ರಾಜಕೀಯ ಮಾಡುವುದಾದರೇ ನಾವು ರಾಜಕೀಯವಾಗಿ ಹೆದರಿಸುತ್ತೇನೆ, ನೋಡ್ತಾ ಇರಿ. ರಾಜಕೀಯವಾಗಿ ಅದಕ್ಕೆ ಉತ್ತರ ಕೊಡುತ್ತೇನೆ ಎಂದಿದ್ದಾರೆ.

Share This Article