ಗಾಂಧೀನಗರ: ಸೋಮನಾಥ ದೇವಾಲಯ ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಬಣ್ಣಿಸಿದರು.
ಗುಜರಾತ್ (Gujarat) ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಸೋಮನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಸೋಮನಾಥ ದೇಗುಲದಲ್ಲಿ ನಡೆಯುತ್ತಿರುವ ಶೌರ್ಯಯಾತ್ರೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಬಳಿಕ ಮಾತನಾಡಿದ ಅವರು, ಜ್ಯೋತಿರ್ಲಿಂಗಗಳಲ್ಲಿ ಒಂದಾದ ಗುಜರಾತ್‌ನ ಶ್ರೀ ಸೋಮನಾಥ ದೇವಾಲಯದ ಮೇಲೆ ಮೊಹಮ್ಮದ್ ಘಜ್ನಿ ಮೊದಲ ಬಾರಿಗೆ ದಾಳಿ ನಡೆಸಿ 1,000 ವರ್ಷಗಳು ಕಳೆದಿವೆ ಎಂದು ಪ್ರಧಾನಿ ಮೋದಿ ಇತಿಹಾಸವನ್ನು ಸ್ಮರಿಸಿದ್ದಾರೆ. ಈ ದೇವಾಲಯ ಕೇವಲ ಕಲ್ಲಿನ ಕಟ್ಟಡವಲ್ಲ, ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ ಎಂದು ಬಣ್ಣಿಸಿದರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ, ಹಣಕಾಸು ಆಯೋಗದ 11,495 ಕೋಟಿ ಬಿಡುಗಡೆಗೆ ಒತ್ತಾಯ!
ಘಜ್ನಿಯಿಂದ ಔರಂಗಜೇಬನವರೆಗೆ, ಎಲ್ಲಾ ಧಾರ್ಮಿಕ ಮೂಲಭೂತವಾದಿಗಳು ತಮ್ಮ ಕತ್ತಿಯ ಬಲದಿಂದ ಸೋಮನಾಥವನ್ನು ಗೆದ್ದಿದ್ದೇವೆ ಎಂದು ಭಾವಿಸಿದ್ದರು. ಆದರೆ ಕಾಲಚಕ್ರ ಉರುಳಿದಂತೆ ಆ ಆಕ್ರಮಣಕಾರರು ಇಂದು ಇತಿಹಾಸದ ಪುಟಗಳಿಗೆ ಸೀಮಿತವಾಗಿದ್ದಾರೆ. ಆದರೆ ಸೋಮನಾಥ ದೇವಾಲಯ ಇಂದಿಗೂ ಹೆಮ್ಮೆಯಿಂದ ತಲೆ ಎತ್ತಿ ನಿಂತಿದೆ ಎಂದು ಮಾರ್ಮಿಕವಾಗಿ ನುಡಿದರು.
ಇತ್ತ ರಾಮ ಜನ್ಮಭೂಮಿ ಆಯೋಧ್ಯೆಯಲ್ಲಿ ಸುಮಾರು 15 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಪದಾರ್ಥ ವಿತರಣೆಯನ್ನ ನಿಷೇಧಿಸಲಾಗಿದೆ. ಅಯೋಧ್ಯೆಯಲ್ಲಿರುವ ಕೆಲವು ಹೋಟೆಲ್‌ಗಳು ಮತ್ತು ಹೋಂ ಸ್ಟೇಗಳು ಅತಿಥಿಗಳಿಗೆ ಮಾಂಸಾಹಾರ, ಮದ್ಯಪಾನವನ್ನು ನೀಡುತ್ತಿವೆ ಎಂದು ಸಾಲು ಸಾಲು ದೂರು ಬಂದ ಹಿನ್ನೆಲೆ ಅಯೋಧ್ಯೆ ಮಹಾನಗರ ಪಾಲಿಕೆ ಕಠಿಣ ಕ್ರಮಕ್ಕೆ ಮುಂದಾಗಿದೆ.ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಆವರಣದಲ್ಲಿ ನಮಾಜ್‌ಗೆ ಯತ್ನ – ಕಾಶ್ಮೀರ ಮೂಲದ ವ್ಯಕ್ತಿ ಪೊಲೀಸ್ ವಶಕ್ಕೆ

