ಮಗನನ್ನು ಹೊಡೆದು ಕೊಂದು ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ!

Public TV
1 Min Read

ಚಿಕ್ಕಬಳ್ಳಾಪುರ: ತಂದೆಯೊಬ್ಬ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ನಂತರ ಬೆಂಕಿ ಹಚ್ಚಿದ ಘಟನೆಯೊಂದು ದೊಡ್ಡಬಳ್ಳಾಪುರ (Doddaballapur) ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ಆದರ್ಶ್ (28) ಎಂದು ಗುರುತಿಸಲಾಗಿದೆ. ಈತನನ್ನು ತಂದೆ ಜಯರಾಮಯ್ಯ(58) ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಸಂಚಾರ ನಿಯಮ ಉಲ್ಲಂಘಿಸಿ ನಾಪತ್ತೆಯಾಗಿದ್ದ ಚಾಲಕ ಕೊಳೆತ ಶವವಾಗಿ ಪತ್ತೆ

ಆದರ್ಶ್ ದಿನನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದನು. ಇತ್ತೀಚೆಗೆ ತಾಯಿಯ ಬಳಿಯೂ ಕುಡಿಯಲು ಹಣ ಕೇಳಿದ್ದ. ಈ ವೇಳೆ ಹಣ ನೀಡಲು ಒಪ್ಪದ ತಾಯಿಗೆ ಮನಬಂದಂತೆ ಥಳಿಸಿದ್ದನು. ಇದರಿಂದ ಬೇಸತ್ತು ತಂದೆ ಜಯರಾಮಯ್ಯ ಮಗನನ್ನು ಕೊಲೆ ಮಾಡಲು ನಿರ್ಧರಿಸಿದ್ದಾನೆ.

ಅಂತೆಯೇ ಶುಕ್ರವಾರ ರಾತ್ರಿ ಬಾರ್ ಬಳಿ ಮಗನಿಗೆ ತಂದೆ ಹೊಡೆದಿದ್ದಾನೆ. ಈ ವೇಳೆ ಆದರ್ಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಂತರ ಮಗನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಈ ಘಟನೆ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ (Doddabelavangala Police Station) ಪ್ರಕರಣ ದಾಖಲಾಗಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್