BJP, RSS ವಿರುದ್ಧ ಹೋರಾಡಲು ಪಕ್ಷದಲ್ಲಿ ಏಕತೆ ಇರಬೇಕು: ಸೋನಿಯಾ ಗಾಂಧಿ

Public TV
1 Min Read

ನವದೆಹಲಿ: ಬಿಜೆಪಿ ಮತ್ತು ಆರ್​ಎಸ್​ಎಸ್ ವಿರುದ್ಧವಾಗಿ ಹೋರಾಡಲು ನಮ್ಮ ಪಕ್ಷದಲ್ಲಿ ಏಕತೆ ಇರಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು, ರಾಜ್ಯಗಳ ಅಧ್ಯಕ್ಷರು ಮತ್ತು ಇತರ ಹಿರಿಯ ನಾಯಕರೊಂದಿಗೆ ಸಭೆ ನಡೆಸಿ ಮಾತನಾಡಿದ ಸೋನಿಯಾ ಗಾಂಧಿ, ಬಿಜೆಪಿ ಮತ್ತು ಆರ್​ಎಸ್​ಎಸ್ ವಿರುದ್ಧ ಹೋರಾಡಲು ಪಕ್ಷದಲ್ಲಿ ಶಿಸ್ತು ಮತ್ತು ಏಕತೆ ತುಂಬ ಮುಖ್ಯ. ಬಿಜೆಪಿ ಮತ್ತು ಆರ್​ಎಸ್‍ಎಸ್‍ನ ಕುಟಿಲತೆಯ ವಿರುದ್ಧ ಸೈದ್ಧಾಂತಿಕವಾಗಿ ಹೋರಾಟ ಮಾಡಬೇಕು. ಅವರು ಹೇಳುತ್ತಿರುವುದು ಸುಳ್ಳು ಎಂಬುದನ್ನು ಜನರಿಗೆ ತೋರಿಸಿಕೊಡಬೇಕು. ಇದನ್ನೆಲ್ಲ ನಾವು ದೃಢವಿಶ್ವಾಸದಿಂದ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ:  ಕುಮಾರಸ್ವಾಮಿಯನ್ನು ಆನೆಯನ್ನಾಗಿ ಮಾಡಿದ್ದು ನಾವು: ಜಮೀರ್

ಈ ದೇಶ ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಎಐಸಿಸಿ ಪ್ರತಿದಿನ ಬಹಳ ಮುಖ್ಯವಾದ ಮತ್ತು ವಿವರವಾದ ಪ್ರಕಟಣೆಗಳನ್ನು ಬಿಡುಗಡೆ ಮಾಡುತ್ತಿದೆ. ಆದರೆ ಅವು ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ಕಾರ್ಯಕರ್ತರಿಗೆ ತಲುಪುತ್ತಿದೆ ಎನ್ನುವ ಕುರಿತಾಗಿ ನನಗೆ ನಂಬಿಕೆಯಿಲ್ಲ. ಹಾಗೇ ಕಾಂಗ್ರೆಸ್ ನೀತಿಯ ಕುರಿತಂತೆ ನಮ್ಮ ರಾಜ್ಯಮಟ್ಟದ ನಾಯಕರಲ್ಲೂ ಸ್ಪಷ್ಟತೆ, ಒಗ್ಗಟ್ಟಿನ ಕೊರತೆಯಿದೆ ಎಂಬುದನ್ನು ನಾನು ಕಂಡುಕೊಂಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೈಲಾಗದವನು ಮೈ ಪರಚಿಕೊಂಡ ಹಾಗೆ, ಜಮೀರ್ ಸ್ಥಿತಿ: ಹೆಚ್‍ಡಿಕೆ ಲೇವಡಿ 

2022ರ ಚುನಾವಣೆಯಲ್ಲಿ ಉತ್ತರಪ್ರದೇಶ, ಉತ್ತರಾಖಂಡ್, ಪಂಜಾಬ್, ಗೋವಾ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದಲ್ಲಿನ ಸ್ಥಿರತೆ ಕಾಪಾಡುವ ಪ್ರಯತ್ನದಲ್ಲಿ ತೊಡಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *