ಟ್ರೋಲ್‌ಗೆ ಡೋಂಟ್ ಕೇರ್- ಮತ್ತೆ ಬಿಕಿನಿ ಫೋಟೋ ಹಂಚಿಕೊಂಡ ಸೋನು

Public TV
2 Min Read

ಳೆದ ಎರಡ್ಮೂರು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಬಿಕಿನಿ ಫೋಟೋ ಹಂಚಿಕೊಳ್ಳುವ ಮೂಲಕ ಇಂಟರ್‌ನೆಟ್ ಬೆಂಕಿ ಹಚ್ಚಿದ್ದಾರೆ. ಟ್ರೋಲ್‌ಗೆ ಕೇರ್ ಮಾಡದೇ, ಬಿಕಿನಿ ಅವತಾರದ ಫೋಟೋಗಳನ್ನ ಶೇರ್ ಮಾಡಿದ್ದಾರೆ.

ಬಿಗ್ ಬಾಸ್ (Bigg Boss Kannada) ಬೆಡಗಿ ಸೋನು ಗೌಡ (Sonu Gowda) ಈಗ ಕೆಂಪು ಬಣ್ಣದ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ಸಖತ್ ಹಾಟ್ ಆಗಿ ಪೋಸ್ ನೀಡಿದ್ದಾರೆ. ಈ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ. ಮಾಲ್ಡೀವ್ಸ್ ವೆಕೇಷನ್ ಎಂಜಾಯ್ ಮಾಡುತ್ತಿರುವ ಸೋನು, ಬಿಕಿನಿ ವಿಡಿಯೋಗಳನ್ನ ಹಂಚಿಕೊಂಡಿದ್ದರು. ವಿಡಿಯೋ ಶೇರ್ ಮಾಡಿದ ಕೆಲವೇ ಗಂಟೆಗಳಲ್ಲಿ 14 ಮಿಲಿಯನ್‌ಗೂ ಅಧಿಕ ವಿವ್ ಪಡೆದುಕೊಂಡಿತ್ತು. ಇದನ್ನೂ ಓದಿ:ಮ್ಯಾರೇಜ್ ಪ್ಲ್ಯಾನ್ ಬಗ್ಗೆ ಅನುಷ್ಕಾ ಶೆಟ್ಟಿ ಸ್ಪಷ್ಟನೆ

ತನ್ನ ವಿಚಾರದಲ್ಲಿ ಯಾರಾದರೂ ಟ್ರೋಲ್ ಮಾಡಿದರೆ ಕಣ್ಣೀರು ಹಾಕುವ ಸೋನು ಶ್ರೀನಿವಾಸ್ ಗೌಡ, ಟ್ರೋಲ್ ಆಗುವಂತಹ ಹಲವಾರು ವಿಚಾರಗಳನ್ನು ಅವರು ಮಾಡುತ್ತಲೇ ಇರುತ್ತಾರೆ. ಹಾಗಾಗಿಯೇ ಟ್ರೋಲ್ ಮಾಡುವವರು ಇವರ ವಿಡಿಯೋಗಾಗಿ ಕಾಯುತ್ತಿರುತ್ತಾರೆ ಎನ್ನುವುದು ಸುಳ್ಳಲ್ಲ.

ಈ ಹಿಂದೆ ಇವರ ಕೆಲ ಖಾಸಗಿ ಫೋಟೋ- ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಹಸಿಬಿಸಿ ದೃಶ್ಯಗಳನ್ನು ನೋಡಿ ಪಡ್ಡೆ ಹುಡುಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದರು. ಜೊತೆಗೆ ಮೊನ್ನೆಯಷ್ಟೇ ಸೋನು ಹೊಸ ವೀಡಿಯೋವೊಂದನ್ನು ಶೇರ್ ಮಾಡಿದ್ದರು, ಹುಡುಗಿಯರಿಗೆ ಮಾತ್ರ ಹುಡುಗರು ನೋಡಬೇಡ ಎಂದು ಹಾಕಿ ಕುತೂಹಲ ಹೆಚ್ಚಿಸಿದ್ದರು.

ಕಂಪನಿಯೊಂದರ ಜಾಹೀರಾತಿಗೆ ಸೋನು ಗೌಡ ಬ್ರಾ ಹೇಗೆ ಧರಿಸುವುದು ಎಂಬ ವೀಡಿಯೋ ಮಾಡಿದ್ದರು. ಹೆಣ್ಣುಮಕ್ಕಳು ಹೇಗೆ ಬ್ರಾ ಹಾಕಬೇಕು, ಯಾವ ರೀತಿಯ ಬ್ರಾ ತೆಗೆದುಕೊಳ್ಳಬೇಕು ಎಂಬುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಸೂಚಿಸಿದ್ದರು. ಜೊತೆಗೆ ಅದನ್ನು ಯಾವ ರೀತಿ ಹಾಕಬೇಕು ಎಂಬುವುದರ ಬಗ್ಗೆ ಕೂಡ ವೀಡಿಯೋ ಮೂಲಕ ತಿಳಿಸಿದ್ದರು. ಆ ವಿಡಿಯೋ ಕೂಡ ವೈರಲ್ ಆಗಿತ್ತು.

ಟಿಕ್ ಟಾಕ್ ರೀಲ್ಸ್‌ನಿಂದ ಸೋಷಿಯಲ್ ಮೀಡಿಯಾದಲ್ಲಿ ಗುರುತಿಸಿಕೊಂಡಿದ್ದ ಸೋನು ಗೌಡ ಬಳಿಕ ಬಿಗ್ ಬಾಸ್ ಒಟಿಟಿ ಅಂಗಳಕ್ಕೆ ಕಾಲಿಟ್ಟು ಜನಪ್ರಿಯತೆ ಗಳಿಸಿದ್ದರು.

ರಾಕೇಶ್ ಅಡಿಗ, ರೂಪೇಶ್ ಶೆಟ್ಟಿ(Roopesh Shetty), ಸಾನ್ಯ ಅಯ್ಯರ್ (Saanya iyer) ಜೊತೆ ಸೋನು ಮಿಂಚಿದ್ದರು. ದೊಡ್ಮನೆ ಆಟ ಮುಗಿದ ಮೇಲೆ ತಮ್ಮ ಯುಟ್ಯೂಬ್‌ನಲ್ಲಿ ಒಂದಲ್ಲಾ ಒಂದು ವಿಚಾರದೊಂದಿಗೆ ಚರ್ಚೆ ಮಾಡುತ್ತಾರೆ.

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್