ಗುಜರಾತ್ ಫಲಿತಾಂಶದ ಬೆನ್ನಲ್ಲೇ ಬಿಎಸ್‍ವೈಗೆ ಹೈಕಮಾಂಡ್‍ ಬುಲಾವ್

Public TV
1 Min Read

ಬೆಂಗಳೂರು: ಗುಜರಾತ್ ಫಲಿತಾಂಶದ ಬೆನ್ನಲ್ಲೇ ಬಿಎಸ್‍ವೈಗೆ ಹೈಕಮಾಂಡ್‍ನಿಂದ ಬುಲಾವ್ ಬಂದಿದೆ.

ಈ ಹಿನ್ನೆಲೆಯಲ್ಲಿ ಬುಧವಾರದಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ಹೈಕಮಾಂಡ್ ಜೊತೆ ಮಹತ್ವದ ಮಾತುಕತೆ ನಡೆಸಲಿರೋ ಬಿಎಸ್‍ವೈ, ರಾಜ್ಯದ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಮಹತ್ವದ ಚರ್ಚೆ ನಡೆಸೋ ಸಾಧ್ಯತೆಯಿದೆ.

ಇದರ ಜೊತೆಗೆ ಲಿಂಗಾಯಿತ ಪ್ರತ್ಯೇಕ ಧರ್ಮ ವಿಚಾರ, ಮಹದಾಯಿ ವಿಚಾರಗಳ ಬಗ್ಗೆ ಸ್ಪಷ್ಟ ನಿಲುವು ತೆಗೆದುಕೊಳ್ಳೋ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. ಬಿಎಸ್‍ವೈ ದೆಹಲಿ ಪ್ರವಾಸ ಹಿನ್ನೆಲೆಯಲ್ಲಿ ನಾಳೆಯ ನವಲಗುಂದ, ನರಗುಂದ, ಗದಗ ಯಾತ್ರೆ ಮುಂದೂಡಿಕೆಯಾಗಿದೆ.

ಇದನ್ನೂ ಓದಿ: ಗುಜರಾತ್ ಚುನಾವಣೆ ಗೆಲುವಿನ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಅಪರೇಷನ್

ಗುಜರಾತ್ ಫಲಿತಾಂಶದ ಬೆನ್ನಲ್ಲೇ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸಂಕ್ರಾಂತಿ ವೇಳೆಗೆ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ, ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಸಾದರಹಳ್ಳಿ ಸಮೀಪ ಏರ್ ಪೋರ್ಟ್ ರಸ್ತೆಯಲ್ಲಿರುವ ಬಹು ದೊಡ್ಡ ವಿಲ್ಲಾವೊಂದನ್ನು ಬಾಡಿಗೆಗೆ ಪಡೆದಿದ್ದಾರೆ. ಬಿಜೆಪಿ ಕಚೇರಿ ಹಾಗೂ ವಿಮಾನ ನಿಲ್ದಾಣಕ್ಕೆ ಹತ್ತಿರವಾಗಲೆಂದು ಸಾದರಹಳ್ಳಿಯಲ್ಲಿ ವಿಲ್ಲಾ ಬಾಡಿಗೆಗೆ ಪಡೆದಿದ್ದಾರೆ. ಈ ವಿಲ್ಲಾದಲ್ಲೇ ಎಲೆಕ್ಷನ್ ಕಾರ್ಯತಂತ್ರ ನಡೆಯುತ್ತದೆ. ವಾರ್ ರೂಂ, ಅಮಿತ್ ಶಾ ಅವರ ಸ್ಟ್ರ್ಯಾಟಜಿ ರೂಂ ಕೂಡ ವಿಲ್ಲಾದಲ್ಲೇ ಇದ್ದು, ವಾರ್ ರೂಂನ 10 ತಂಡವೂ ಬೆಂಗಳೂರಿಗೆ ಶಿಫ್ಟ್ ಆಗಲಿದೆ.

ಅಮಿತ್ ಶಾ ಅವರು ವಾರದಲ್ಲಿ ಎರಡು ಬಾರಿ ಬೆಂಗಳೂರಿಗೆ ಭೇಟಿ ಕೊಡಲಿದ್ದಾರೆ. ಈ ವೇಳೆ ಮಂಗಳೂರು, ಮೈಸೂರು, ಹುಬ್ಬಳಿ, ಬೆಳಗಾವಿಗೂ ಕೂಡ ಅವರು ಹೋಗಲಿದ್ದಾರೆ. ಒಟ್ಟಿನಲ್ಲಿ ಹೊಸ ವರ್ಷದಿಂದ ಕರ್ನಾಟಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಅವರ ಅಸಲಿ ಆಟ ಶುರುವಾಗಲಿದೆ ಎಂದು ಹೇಳಲಾಗ್ತಿದೆ.

ಇದನ್ನೂ ಓದಿ: ಮತಎಣಿಕೆಗೆ 1 ಗಂಟೆ ಮುನ್ನವೇ ಸಿದ್ದರಾಮಯ್ಯ ಹೇಳಿದ್ರು ಗುಜರಾತ್ ಫಲಿತಾಂಶದ `ಲೆಕ್ಕಾಚಾರ’

Share This Article
Leave a Comment

Leave a Reply

Your email address will not be published. Required fields are marked *