ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ನೇಮಕ

Public TV
1 Min Read

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಅರವನ್ನು ನೂತನ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯನ್ನಾಗಿ ಕಾಂಗ್ರೆಸ್‌ ಹೈಕಮಾಂಡ್‌ ನೇಮಕ ಮಾಡಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ಜೊತೆಗೆ ಚಂಢೀಗಡ ಮತ್ತು ಅರುಣಾಚಲ ಪ್ರದೇಶ ಮಹಿಳಾ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಇದನ್ನೂ ಓದಿ: ವಿನೇಶ್‌ ಫೋಗಟ್‌ ʼಬೆಳ್ಳಿʼ ತೀರ್ಪು ಆ.16ಕ್ಕೆ ಮುಂದೂಡಿಕೆ

ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿಯಾಗಿರುವ ಸೌಮ್ಯಾ ರೆಡ್ಡಿ ಅವರು ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

ಸದ್ಯ ಪುಷ್ಪಾ ಅಮರನಾಥ್ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದರು.

Share This Article