ಬೆಂಗಳೂರು: ಕ್ಯಾನ್ಸರ್ ನಿಂದ (Cancer) ಬಳಲುತ್ತಿದ್ದ ಎಸ್ಪಿ ಲಾವಣ್ಯ (BN Lavanya) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ಸಾವಿಗೀಡಾಗಿದ್ದಾರೆ.
ಬೆಸ್ಕಾಂ ವಿಜಿಲೆನ್ಸ್ ನಲ್ಲಿ ಎಸ್ಪಿಯಾಗಿದ್ದ ಲಾವಣ್ಯ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಶನಿವಾರ) ಮಧ್ಯಾಹ್ನ 2:30 ರ ಸುಮಾರಿಗೆ ಸಾವನ್ನಪ್ಪಿದ್ದಾರೆ. ಮೃತರು 10 ವರ್ಷದ ಗಂಡು ಮಗು ಹಾಗೂ 3 ವರ್ಷದ ಹೆಣ್ಣುವನ್ನ ಅಗಲಿದ್ದಾರೆ.
ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮದವರಾದ ಲಾವಣ್ಯ 2023 ರಿಂದಲೂ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ..

ಮಂಡ್ಯ ಮತ್ತು ಬಳ್ಳಾರಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷರಾಗಿ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲ, ಬೆಂಗಳೂರಿನಲ್ಲಿ ಇಂಟಲಿಜೆನ್ಸ್ ಮತ್ತು ಡಿಸಿಆರ್‌ಇ ಎಸ್ಪಿ ಆಗಿ ಕೆಲಸ ಮಾಡಿದ್ದಾರೆ.
ಇತ್ತೀಚೆಗಷ್ಟೇ ವಿದ್ಯಾರಣ್ಯಪುರದಲ್ಲಿರುವ ನಿವಾಸಕ್ಕೆ ಎರಡು ತಿಂಗಳ ಹಿಂದೆ DG&IGP ಡಾ. ಎಂ.ಎ ಸಲೀಂ ಭೇಟಿ ನೀಡಿ ಧೈರ್ಯ ತುಂಬಿದ್ದರು. ಚೇತರಿಸಿಕೊಳ್ಳುವಂತೆ ಹಾರೈಸಿ ಕುಟುಂಬದವರಿಗೂ ಸಹ ಧೈರ್ಯ ತುಂಬಿ ಬಂದಿದ್ದರು.

