ಎಸ್‌ಪಿ ಶೋಭಾ ಕಟಾವ್ಕರ್ ಮನೆಯಲ್ಲಿ ಶವವಾಗಿ ಪತ್ತೆ

Public TV
1 Min Read

ಬೆಂಗಳೂರು: ಇತ್ತೀಚೆಗೆ ಎಸ್‌ಪಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಶೋಭಾ ಕಟಾವ್ಕರ್(53) ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದರು. ಸದಸ್ಯರು ತೆರಳಿದ್ದರೂ ಪುಟ್ಟೇನಹಳ್ಳಿಯ ನಿವಾಸದಲ್ಲಿ ಶೋಭಾ ಇಂದು ಒಬ್ಬರೇ ಇದ್ದರು. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಶಿವರಾಜ್ ಪಾಟೀಲ್‌ರಿಂದ ಗುತ್ತಿಗೆದಾರರಿಗೆ ಪರ್ಸೆಂಟೇಜ್ ಕಿರಿಕಿರಿಯಿದೆ: ರವಿ ಬೋಸರಾಜು ಆರೋಪ

ಮನೆಯ ಸದಸ್ಯರು ಇಂದು ಸಂಜೆ ಕಟಾವ್ಕರ್‌ಗೆ ಕರೆ ಮಾಡಿದ್ದಾಗ ಅವರು ಫೋನ್ ರಿಸೀವ್ ಮಾಡಿರಲಿಲ್ಲ. ಹೀಗಾಗಿ ಮನೆಯ ಸೆಕ್ಯುರಿಟಿಗೆ ಪರಿಶೀಲಿಸಲು ಸೂಚಿಸಿದ್ದರು. ರಾತ್ರಿ 8 ಗಂಟೆಯ ವೇಳೆ ಮನೆಯನ್ನು ಸೆಕ್ಯೂರಿಟಿ ಮನೆಯನ್ನು ಪರಿಶೀಲಿಸಿದಾಗ ಕಟಾವ್ಕರ್ ಸಾವನ್ನಪ್ಪಿರುವುದು ಪತ್ತೆಯಾಗಿದೆ. ಇದನ್ನೂ ಓದಿ: ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಈಶ್ವರಪ್ಪ

ಶೋಭಾ ಕಟಾವ್ಕರ್ ಕಲಬುರಗಿಯ ಪಿಟಿಸಿ ಉಪ ಪ್ರಾಂಶುಪಾಲರಾಗಿ ನಿಯೋಜನೆಗೊಂಡಿದ್ದರು. ಇದೀಗ ಪುಟ್ಟೇನಹಳ್ಳಿ ಪೊಲೀಸರು ಇದನ್ನು ಅಸಹಜ ಸಾವೆಂದು ಪರಿಗಣಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *