ಬೆಂಗಳೂರು: ಎಸ್‌ಸಿ (SC) ಸಮುದಾಯದ 101 ಜಾತಿಗಳಿದ್ದು, ಒಳ ಮೀಸಲಾತಿ (Internal Reservation) ಜಾರಿ ಮಾಡುವಾಗ ಯಾವುದೇ ಜಾತಿಗೆ ಅನ್ಯಾಯ ಆಗದಂತೆ ನಿರ್ಣಯ ತೆಗೆದುಕೊಳ್ಳಿ ಎಂದು ಶಾಸಕ ಬಿವೈ ವಿಜಯೇಂದ್ರ (BY Vijayendra) ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನೀವು ರಾಜ್ಯದ ಮುಖ್ಯಮಂತ್ರಿಗಳು. ಒಳ ಮೀಸಲಾತಿ ವಿಚಾರದಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಎಸ್‌ಸಿ ಸಮುದಾಯದ 101 ಜಾತಿಗಳಿದ್ದು, ಯಾವುದೇ ಜಾತಿಗೆ ಅನ್ಯಾಯ ಆಗದಂತೆ ನಿರ್ಣಯ ತೆಗೆದುಕೊಳ್ಳಬೇಕು. ನೀವು ತೆಗೆದುಕೊಳ್ಳುವ ತೀರ್ಮಾನದಿಂದ ನಾಳೆ ಇತರ ಜಾತಿಗಳವರು, ಎಸ್‌ಸಿ ಸಮುದಾಯದವರು ಬೀದಿಗಿಳಿದು ಹೋರಾಟ ಮಾಡದಂತೆ ನೋಡಿಕೊಳ್ಳಿ ಎಂದು ತಿಳಿಸಿದರು. ಇದನ್ನೂ ಓದಿ: ಬಸವಸಾಗರ ಡ್ಯಾಂನಿಂದ ಕೃಷ್ಣ ನದಿಗೆ 1.60 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಲಿಂಗಸೂಗುರು ಸೇತುವೆ ಮುಳುಗಡೆ
ಎಲ್ಲ ವಿಷಯಗಳನ್ನೂ ವಿಮರ್ಶಿಸಿ, ಸಮರ್ಪಕ ತೀರ್ಮಾನವನ್ನು ರಾಜ್ಯದ ಮುಖ್ಯಮಂತ್ರಿಗಳು ತೆಗೆದುಕೊಳ್ಳಬೇಕು ಎಂದು ವಿನಂತಿಸಿದರು. ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲ ಗೊಂದಲಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಾರಣಕರ್ತರು. ಗೊಂದಲಗಳು, ಸಮಸ್ಯೆಗೆ ಇತಿಶ್ರೀ ಹಾಡುವ ಕರ್ತವ್ಯ ಈ ರಾಜ್ಯದ ಮುಖ್ಯಮಂತ್ರಿಗಳಿಗೆ ಇದೆ. ಅದನ್ನು ಸರಿಯಾದ ರೀತಿಯಲ್ಲಿ ನಿಭಾಯಿಸುತ್ತಾರೆ ಎಂಬ ಅಪೇಕ್ಷೆಯಲ್ಲಿ ನಮ್ಮ ಎಸ್‌ಸಿ ಸಮುದಾಯ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಉಪರಾಷ್ಟ್ರಪತಿ ಚುನಾವಣೆ – ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ
ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಒಳ ಮೀಸಲಾತಿ ವಿಷಯದಲ್ಲಿ ಯಾವುದೇ ಒಂದು ತೀರ್ಮಾನ ತೆಗೆದುಕೊಳ್ಳಲು ಆಗಿಲ್ಲ. ಸರ್ಕಾರವು ಗೊಂದಲದಲ್ಲಿ ಇರುವುದನ್ನು ನಾವು ನೋಡಿದ್ದೇವೆ ಎಂದು ಟೀಕಿಸಿದರು. ಇದನ್ನೂ ಓದಿ: ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್
ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರ ಇದ್ದಾಗ ಪರಿಶಿಷ್ಟ ಜಾತಿಗೆ 15% ಇದ್ದುದನ್ನು 17%ಗೆ ಏರಿಸಿದ್ದರು. ಪರಿಶಿಷ್ಟ ಪಂಗಡಕ್ಕೆ 3% ಇದ್ದುದನ್ನು ಏರಿಸಿ 7% ಮಾಡಿದ್ದರು. ಆಗ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯನವರು, ಅವರ ಜೊತೆಗಾರರು ಅದು ಅನುಷ್ಠಾನ ಆಗಿಲ್ಲ, ಬಿಜೆಪಿಯವರು ಕೇವಲ ಭಾಷಣ ಮಾಡುತ್ತಾರೆ ಎಂದು ಅಪಪ್ರಚಾರ ಮಾಡಿದ್ದರು ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ನೇಮಕಾತಿ ಪರೀಕ್ಷೆಗಳ ಏಕರೂಪ ಶುಲ್ಕ; ಪ್ರಾಥಮಿಕ ಹಂತಕ್ಕೆ 100 ರೂ., ಮುಖ್ಯ ಪರೀಕ್ಷೆ ಉಚಿತ
ನಾಗಮೋಹನ್‌ದಾಸ್ ವರದಿ ಅಂಶಗಳು ಏನಿದೆಯೋ ಅದನ್ನೇ ಬಿಜೆಪಿ ಈ ಹಿಂದೆ ಜಾರಿ ಮಾಡಿತ್ತು. ಸಿದ್ದರಾಮಯ್ಯನವರು ಇವತ್ತು ಸಚಿವ ಸಂಪುಟದ ವಿಶೇಷ ಸಭೆ ಕರೆದಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ಮಾಡಿದ್ದನ್ನೇ ಇವರೂ ಮಾಡಲು ಹೊರಟಿದ್ದಾರೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಮುಂದಿನ ಬಾರಿ ರಾಹುಲ್ ಗಾಂಧಿಯನ್ನ ಪ್ರಧಾನಿ ಮಾಡುತ್ತೇವೆ – ಮತದಾರ ಅಧಿಕಾರ್ ರ‍್ಯಾಲಿಯಲ್ಲಿ ತೇಜಸ್ವಿ ಯಾದವ್ ಘೋಷಣೆ