ಶ್ರೀರಾಮನ ಪ್ರಾಣಪ್ರತಿಷ್ಠೆ ಸಮಯಕ್ಕೆ ರಾಜ್ಯದ ದೇವಾಲಯಗಳಲ್ಲೂ ವಿಶೇಷ ಪೂಜೆ, ಮಹಾಮಂಗಳಾರತಿ

Public TV
1 Min Read

– ಮುಜರಾಯಿ ಇಲಾಖೆ ಅಧಿಕಾರಿಗಳಿಗೆ ಸಚಿವ ರಾಮಲಿಂಗರೆಡ್ಡಿ ಸೂಚನೆ

ಬೆಂಗಳೂರು: ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ (Ayodhya Ram Mandir) ಉದ್ಘಾಟನೆ ನೆರವೇರಲಿದೆ. ಇದೇ ಸಂದರ್ಭದಲ್ಲಿ ರಾಜ್ಯದ ನೂರಾರು ದೇವಾಲಯಗಳಲ್ಲಿಯೂ (Temples) ವಿಶೇಷ ಪೂಜೆ ಪುನಸ್ಕಾರಗಳು ನೆರವೇರಲಿವೆ.

ಶನಿವಾರ ಬೆಂಗಳೂರಿನಲ್ಲಿ (Bengaluru) ಮುಜರಾಯಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy), ಜನವರಿ 22ರಂದು ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಅದೇ ಸಮಯಕ್ಕೆ ಸರಿಯಾಗಿ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ನೇರವೇರಿಸುವ ಮೂಲಕ ವಿಶೇಷ ಗೌರವ ಸಲ್ಲಿಸುವಂತೆ ಸೂಚಿಸಿದ್ದಾರೆ. ಸೋಮವಾರ (ಜ.8) ಈ ಸಂಬಂಧ ಅಧಿಕೃತ ಆದೇಶ ಹೊರ ಬೀಳುವ ಸಾಧ್ಯತೆ. ಇದನ್ನೂ ಓದಿ: ವೈದಿಕ ಪಂಡಿತರಿಗಾಗಿ ಕ್ರಿಕೆಟ್‌ ಟೂರ್ನಿ – ವಿಜೇತರಿಗೆ ಅಯೋಧ್ಯೆ ಟ್ರಿಪ್‌

ಅಂದು ಮಧ್ಯಾಹ್ನ 12 ಗಂಟೆ 29 ನಿಮಿಷ 8 ಸೆಕೆಂಡ್‌ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್ ಸಮಯದಲ್ಲಿ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ದೇವಸ್ಥಾನಗಳಲ್ಲಿ ಮಹಾಮಂಗಳರತಿ ನೆರವೇರಲಿದೆ. ಅಲ್ಲದೇ ದೇಶಕ್ಕೆ ಮತ್ತು ರಾಜ್ಯಕ್ಕೆ ಶ್ರೀ ರಾಮನ ರಕ್ಷಣೆ ಇರಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಇದನ್ನೂ ಓದಿ: ಉತ್ತರ ಪ್ರದೇಶದ ಎಲ್ಲಾ ಜೈಲುಗಳಲ್ಲೂ ರಾಮಮಂದಿರ ಉದ್ಘಾಟನೆ ನೇರಪ್ರಸಾರ

Share This Article