ಭಾರತೀಯ ಯೋಧರಿಗೆ ಶಕ್ತಿ ತುಂಬಲು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ

Public TV
1 Min Read

– ವೀರ ಯೋಧರಿಗೆ ಹೋರಾಡಲು ಅಲ್ಲಾ ಶಕ್ತಿ ನೀಡಿಲಿ ಎಂದು ಪ್ರಾರ್ಥಿಸಿದ ಮುಸ್ಲಿಂ ಬಾಂಧವರು

ಬೀದರ್/ಕೋಲಾರ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಮೇಲೆ ಭಾರತ ನಡೆಸುತ್ತಿರುವ ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ ಭಾರತೀಯ ಯೋಧರಿಗೆ ಶಕ್ತಿ ತುಂಬಲು ಇಂದು ಮಸೀದಿಗಳಲ್ಲಿ (Mosque) ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಗಡಿ ಜಿಲ್ಲೆ ಬೀದರ್‌ನಲ್ಲಿ ವಕ್ಫ್‌ಗೆ ಸೇರಿದ ಹಾಗೂ ಇತರೆ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ಜಾಮಿಯಾ, ಅಬ್ಧುಲ್ ಫೈಜಾ ಮಸೀದಿ ಸೇರಿದಂತೆ ಎಲ್ಲಾ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆ ಮಾಡಿದ್ದಾರೆ. ಬೀದರ್‌ನ ಚಿದ್ರಿ, ಓಲ್ಡ್ ಸಿಟಿ, ನ್ಯೂ ಬಸ್ ನಿಲ್ದಾಣ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ‘ಆಪರೇಷನ್ ಸಿಂಧೂರ’ ಇಡೀ ದೇಶದ ಸ್ವಾಭಿಮಾನ, ಧೈರ್ಯ ಹೆಚ್ಚಿಸಿದೆ: ಆರ್‌ಎಸ್‌ಎಸ್

ಆಪರೇಷನ್ ಸಿಂಧೂರದಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಈ ಮೂಲಕ ಶಾಂತಿಯ ಸಂದೇಶ ನೀಡುತ್ತಿರುವ ಭಾರತೀಯ ವೀರ ಯೋಧರಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಆಪರೇಷನ್ ಸಿಂಧೂರ ಮೂಲಕ ಭಾರತೀಯ ಯೋಧರು ತಮ್ಮ ತಾಕತ್ತು ತೋರಿಸಿದ್ದು, ಭಾರತ ಇಂದು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ. ವೀರ ಯೋಧರಿಗೆ ಅಲ್ಲಾ ಹೋರಾಡಲು ಶಕ್ತಿ ನೀಡಿಲಿ ಎಂದು ಮಸೀದಿಯ ಪ್ರಾರ್ಥನೆ ವೇಳೆ ಮೌಲ್ವಿ ಪ್ರಾರ್ಥನೆ ಮಾಡಿದ್ದಾರೆ. ಇದನ್ನೂ ಓದಿ: ಉಗ್ರರ ನಾಶಕ್ಕೆ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಿಂದ ಭಾರತ ಸೇನೆಗೆ 10 ಲಕ್ಷ ದೇಣಿಗೆ

ಇನ್ನು ದೇಶದ ಸೈನ್ಯ ಮತ್ತು ಸೈನಿಕರ ಆರೋಗ್ಯಕ್ಕೆ ಕೊಲಾರದ ಹಲವು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಮುಸ್ಲಿಂ ಸಮುದಾಯದವರು ಶುಭ ಹಾರೈಸಿದರು. ಶುಕ್ರವಾರದ ಸಾಮೂಹಿಕ ನಮಾಜ್‌ನಲ್ಲಿ ಸೈನಿಕರಿಗಾಗಿ ವಿಶೇಷ ಪ್ರಾರ್ಥನೆ ಮಾಡಿ ಪಾಕಿಸ್ತಾನದ ವಿರುದ್ಧ ಸೈನಿಕರಿಗೆ ಶಕ್ತಿ ನೀಡಲು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡರು. ಇದನ್ನೂ ಓದಿ: ಭಾರತ-ಪಾಕ್ ಯುದ್ಧ ಭೀತಿ; ಚಂಡೀಗಢ ಸರ್ಕಾರದಿಂದ 2 ತಿಂಗಳು ಪಟಾಕಿ ಬ್ಯಾನ್

Share This Article