ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್

Public TV
1 Min Read

ಬೆಂಗಳೂರು: ಆರ್‌ಸಿಬಿಯ (RCB) ಬೆಂಗಳೂರಿನ ಅಭಿಮಾನಿಗಳಿಗೆ ಸಿಹಿ ಸುದ್ದಿ. 18 ವರ್ಷಗಳ ಕನಸು ನನಸಾದ ಬೆನ್ನಲ್ಲೇ ಇಂದು ಸಂಜೆ ಬೆಂಗಳೂರಿನಲ್ಲಿ (Bengaluru) ಆರ್‌ಸಿಬಿಯ ವಿಕ್ಟರಿ ಪರೇಡ್‌ (RCB Victory Parade) ನಡೆಯಲಿದೆ.

ಅಧಿಕೃತವಾಗಿ ಆರ್‌ಸಿಬಿ ಈ ವಿಚಾರವನ್ನು ತಿಳಿಸಿದ್ದು ಮಧ್ಯಾಹ್ನ 3:30ಕ್ಕೆ ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಆರಂಭಗೊಳ್ಳಲಿದ್ದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಯಾಗಲಿದೆ. ಈ ಬಗ್ಗೆ ಶೀಘ್ರವೇ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಆರ್‌ಸಿಬಿ ತಿಳಿಸಿದೆ. ಇದನ್ನೂ ಓದಿ: IPL 2025 – ಫೈನಲ್ ಪಂದ್ಯದ ‘ಲಕ್ಕಿ ಕ್ರಿಕೆಟರ್’ ಹೇಜಲ್‌ವುಡ್

ಫೈನಲ್‌ ಪಂದ್ಯ ಗೆದ್ದ ಬಳಿಕ ವಿರಾಟ್‌ ಕೊಹ್ಲಿ ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್‌ ನಡೆಸಲಾಗುವುದು ಎಂದು ತಿಳಿಸಿದ್ದರು. ಇದನ್ನೂ ಓದಿ: UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಈಗ ಆರ್‌ಸಿಬಿಯ ಯಶಸ್ವಿ ನಾಯಕ

ಅಭಿಮಾನಿಗಳನ್ನು 12ನೇ ಸೇನೆ ಎಂದೇ ಆರ್‌ಸಿಬಿ ಕರೆಯುತ್ತಿದೆ. ಈ ಕಿರೀಟ ನಿಮಗೆ ಸೇರಿದ್ದು ಎಂದು ಹೇಳಿದೆ.

Share This Article