ಬೆಂಗಳೂರು: ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಮಂಗಳೂರು ಜಂಕ್ಷನ್ ನಡುವೆ ಒಂದು ಟ್ರಿಪ್’ಗೆ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲಿದೆ.
ರೈಲು ಸಂಖ್ಯೆ 06257 ಯಶವಂತಪುರ–ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆ.30ರ ರಾತ್ರಿ 11:55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06258 ಮಂಗಳೂರು ಜಂಕ್ಷನ್ – ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಅ.1 ರಂದು ಮಧ್ಯಾಹ್ನ 2:35ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ಅದೇ ದಿನ ರಾತ್ರಿ 11:30 ಕ್ಕೆ ಯಶವಂತಪುರ ತಲುಪಲಿದೆ.
ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದೆ. ಈ ರೈಲು 22 ಬೋಗಿಗಳನ್ನು ಒಳಗೊಂಡಿದ್ದು, ಇದರಲ್ಲಿ ಎರಡು ಎಸಿ 2-ಟೈರ್, ಮೂರು ಎಸಿ 3-ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ಎರಡನೇ ದರ್ಜೆ ಮತ್ತು ಎರಡು ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.