ನಿಯಂತ್ರಣ ತಪ್ಪಿ 6 ಕಾರುಗಳಿಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಡಿಫೆಂಡರ್ – ಚಾಲಕ ವಶಕ್ಕೆ

Public TV
1 Min Read

ಲಕ್ನೋ: ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್ (Land Rover Defender) ಕಾರು ಚಾಲಕನ ನಿಯಂತ್ರಣ ತಪ್ಪಿ ಕನಿಷ್ಟ 6 ಕಾರುಗಳಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ನೋಯ್ಡಾ (Noida) ಮಾಲ್ ಬಳಿ ನಡೆದಿದೆ.

ಬುಧವಾರ ರಾತ್ರಿ ನೋಯ್ಡಾದ ಮಾಲ್ ಬಳಿ ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್ ನಿಯಂತ್ರಣ ತಪ್ಪಿ ಕನಿಷ್ಠ ಆರು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಲ್ಯಾಂಡ್ ರೋವರ್ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಇದನ್ನೂ ಓದಿ: ಬಿಹಾರ ಎಲೆಕ್ಷನ್ ತನಕ ಸುಮ್ಮನಿದ್ದುಬಿಡಿ: ರಾಜಣ್ಣ ಮಾರ್ಮಿಕ ನುಡಿ

ಸೆಕ್ಟರ್ 129ರ ಗುಲ್ಶನ್ ಒನ್29 ಮಾಲ್ ಹೊರಗೆ ಈ ಘಟನೆ ನಡೆದಿದೆ. ವೇಗವಾಗಿ ಬಂದ ಲ್ಯಾಂಡ್ ರೋವರ್ ಕಾರು 5 ನಾಲ್ಕು ಚಕ್ರದ ವಾಹನಗಳು ಮತ್ತು ಒಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕನನ್ನು ಸೆಕ್ಟರ್ 100ರ ನಿವಾಸಿ ಸುನೀಲ್ ಎಂದು ಗುರುತಿಸಲಾಗಿದ್ದು, ಕಾರು 1111 ಎಂಬ ವಿವಿಐಪಿ ನಂಬರ್ ಪ್ಲೇಟ್ ಹೊಂದಿದೆ. ಇದನ್ನೂ ಓದಿ: ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

ಘಟನೆಯ ಮಾಹಿತಿ ತಿಳಿದ ತಕ್ಷಣ ಎಕ್ಸ್‌ಪ್ರೆಸ್‌ವೇ ಪೊಲೀಸ್ ಠಾಣೆಯ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ಚಾಲಕನನ್ನು ವಶಕ್ಕೆ ಪಡೆದಿದೆ ಎಂದು ನೋಯ್ಡಾ ಪೊಲೀಸ್ ಕಮಿಷನರೇಟ್ ತಿಳಿಸಿದೆ. ಅಲ್ಲದೇ ಇತರೆ ಕಾರುಗಳಿಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೆಮ್ಮಿನ ಸಿರಪ್ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳ ಸಾವು – ಫಾರ್ಮಾ ಕಂಪನಿ ಮಾಲೀಕ ಅರೆಸ್ಟ್

Share This Article