ನವದೆಹಲಿ: ತಮಿಳುನಾಡಿನಲ್ಲಿ (Tamil Nadu) ವಿಜಯ್ (Vijay) ನೇತೃತ್ವದ ಟಿವಿಕೆ (TVK) ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ವಿಜಯ್ ಅವರಿಗೆ ಶುಭಹಾರೈಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ನಾನು ತಿರು ವಿಜಯ್ ಅವರೊಂದಿಗೆ ಮಾತನಾಡಿ ಟಿವಿಕೆಯ ಅದ್ಭುತ ಫಲಿತಾಂಶಕ್ಕಾಗಿ ಅವರನ್ನು ಅಭಿನಂದಿಸಿದೆ. ತಮಿಳುನಾಡು ಮತ್ತು ಪುದುಚೇರಿಯ ಕಾಂಗ್ರೆಸ್ ಕಾರ್ಯಕರ್ತರ ಕಠಿಣ ಪರಿಶ್ರಮ ಮತ್ತು ಬೆಂಬಲಕ್ಕೆ ನಾನು ಹೃತ್ಪೂರ್ವಕ ಧನ್ಯವಾದ ಸಲ್ಲಿಸುತ್ತೇನೆ. ಕಾಂಗ್ರೆಸ್ ಪಕ್ಷವು ತಮಿಳುನಾಡು ಮತ್ತು ಪುದುಚೇರಿಯ ಜನರನ್ನು ರಕ್ಷಿಸುವುದನ್ನು ಮತ್ತು ಸೇವೆ ಮಾಡುವುದನ್ನು ಮುಂದುವರಿಸುತ್ತದೆ ಎಂದು ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!
ಇನ್ನು ಪಂಚರಾಜ್ಯಗಳ ಫಲಿತಾಂಶದ ಕುರಿತು ರಾಹುಲ್ ಗಾಂಧಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಹಾಗೂ ಟಿವಿಕೆ ಪಕ್ಷದ ವಿಜಯ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ. ಇದನ್ನೂ ಓದಿ: ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

