ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮ ಸೇನೆ

Public TV
2 Min Read

ಚಿಕ್ಕಬಳ್ಳಾಪುರ: ಅಕ್ರಮವಾಗಿ ರಾಶಿರಾಶಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಶ್ರೀರಾಮ ಸೇನೆ (Sri Ram Sena) ಕಾರ್ಯಕರ್ತರು (Activists) ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ನಗರದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ನಗರದ ಐಬಿ ವೃತ್ತದಲ್ಲಿ ಆಂಧ್ರಪ್ರದೇಶದ ಹಿಂದೂಪುರ ಕಡೆಯಿಂದ ಗೌರಿಬಿದನೂರು-ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರಿನ ಶಿವಾಜಿನಗರಕ್ಕೆ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅತಿ ವೇಗದಿಂದ ಕಾರು ತಡೆದಾಗ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕಾರು ತಡೆ ಹಿಡಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಾರಿನ ಗಾಜು ಪುಡಿಪುಡಿ ಮಾಡಿ ಕಾರಿನಲ್ಲಿದ್ದ ರಾಶಿ ರಾಶಿ ಮಾಂಸವನ್ನು ರಸ್ತೆಗೆ ಸುರಿದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಬಂದ್ ಮಾಡಿದರೆ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ – ಡಿಕೆಶಿ ಹೇಳಿಕೆಗೆ ಆಕ್ರೋಶ

ಇದೇ ವೇಳೆ 4 ಬೊಲೆರೋ ಪಿಕ್‌ಅಪ್ ಹಾಗೂ 1 ಮಿನಿ ಟೆಂಪೋ ಮೂಲಕ ಲೋಡ್‌ಗಟ್ಟಲೆ ಗೋಮಾಂಸ (Beef) ಸಾಗಾಟ ಮಾಡುತ್ತಿದ್ದು, ಆ ವಾಹನಗಳಿಗೆ ಮುಂದೆ ಎಸ್ಕಾರ್ಟ್ ವಾಹನವಾಗಿ ಕಾರು ಆಗಮಿಸುತ್ತಿತ್ತು ಎಂದು ತಿಳಿದುಬಂದಿದೆ. ಈ 5 ವಾಹನಗಳನ್ನು ತಡೆದ ಶ್ರೀರಾಮ ಸೇನೆ ಕಾರ್ಯಕರ್ತರು ಗೋಮಾಂಸ ಸಾಗಾಟ ಮಾಡುತ್ತಿದ್ದವರ ಚಳಿ ಬಿಡಿಸಿದ ಬಳಿಕ ಅವರ ತಲೆಯ ಮೇಲೆ ಗೋವಿನ ಕಡಿದ ತಲೆ ಹೊರಿಸಿ ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿಸಿದ್ದಾರೆ. ಘೋಷಣೆ ಕೂಗದೆ ಇದ್ದಾಗ, ತಲೆಯ ಮೇಲೆ ಗೋವು ಹೊರಲು ಹಿಂದೇಟು ಹಾಕಿದವರಿಗೆ ಕೋಲಿನಿಂದ ಬಾರಿಸಲಾಗಿದೆ. ಇದಾದ ನಂತರ ಕಾರಿಗೆ ಬೆಂಕಿ ಹಚ್ಚಲಾಗಿದೆ. ಇದನ್ನೂ ಓದಿ: ಐಫೋನ್‌ ನೀಡಲು ತಡ ಮಾಡಿದ್ದಕ್ಕೆ ಸಿಬ್ಬಂದಿ ಮೇಲೆ ಗ್ರಾಹಕರಿಂದ ಹಲ್ಲೆ

ವಿಷಯ ತಿಳಿದ ದೊಡ್ಡಬಳ್ಳಾಪುರ ನಗರ ಪೊಲೀಸರು ಡಿವೈಎಸ್ಪಿ ರವಿ ಘಟನಾ ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತವಾರಣವಿದ್ದು, ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಒಂದೇ ದಿನ 19 ಮಂದಿ ಸಂಚಾರಿ ಪೊಲೀಸರ ಅಮಾನತು

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್