ಗೋ ರಕ್ಷಣೆ ಮಾಡಲು ಮುಂದಾಗಿದ್ದಕ್ಕೆ ಮರಕ್ಕೆ ಕಟ್ಟಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ

Public TV
1 Min Read

ಬೆಳಗಾವಿ: ಗೋ ರಕ್ಷಣೆ ಮಾಡಲು ಮುಂದಾದ ಹಿಂದೂ ಕಾರ್ಯಕರ್ತರ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ ಘಟನೆ ಹುಕ್ಕೇರಿ (Hukkeri) ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.

ಗೋ ಶಾಲೆಯಿಂದ ಗೋವುಗಳನ್ನು ತೆಗೆದುಕೊಂಡು ಹೋಗಿದ್ದನ್ನು ನೋಡಿ 5 ಮಂದಿ ಶ್ರೀರಾಮ ಸೇನೆಯ (Sri Rama Sene) ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆ ಮಾಡಿದ್ದಕ್ಕೆ ದಲ್ಲಾಳಿಗಳು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.  ಇದನ್ನೂ ಓದಿ: ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಣೆ – ಪಂಚಾಯತ್‌ ಸದಸ್ಯ ಅರೆಸ್ಟ್‌

 

ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಥಳಿಸುತ್ತಿರುವ ವಿಡಿಯೋ ಹರಿದಾಡುತ್ತಿದೆ.

ಈ ಬಗ್ಗೆ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ವಿಠ್ಠಲ್ ಗಡ್ಡಿ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿರುವುದು ಸಿದ್ದರಾಮಯ್ಯ ಸರ್ಕಾರ ಅಲ್ಲ. ಇದು ಖಾನ್ ಸರ್ಕಾರ. ಪೊಲೀಸರಿಗೆ ದೂರು ಕೊಡಲು ಹೋದರೆ ರೇಪ್ ಮಾಡಿದ್ದೀರಿ ಎಂದು ಧಮಕಿ ಹಾಕಿದ್ದಾರೆ. ಕಾನೂನು ರೀತಿಯಲ್ಲಿ ಥಳಿಸಿದವರಿಗೆ ಶಿಕ್ಷೆಯಾಗಬೇಕು. ಸರಿಯಾಗಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Share This Article