ಭಕ್ತರೊಂದಿಗೆ ಆಶ್ರಮದಲ್ಲಿ ‘ಕಾಂತಾರ’ ವೀಕ್ಷಿಸಿದ ಶ್ರೀ ಶ್ರೀ ರವಿಶಂಕರ ಗುರೂಜಿ

Public TV
2 Min Read

ಮೊನ್ನೆಯಷ್ಟೇ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮದಲ್ಲಿ ಮುನ್ನೂರಕ್ಕೂ ಹೆಚ್ಚು ಭಕ್ತರು ಕಾಂತಾರ (Kantara) ಸಿನಿಮಾ ವೀಕ್ಷಿಸಿದ್ದರು. ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನೂ ಆಡಿದ್ದರು. ಇದೀಗ ಬೆಂಗಳೂರಿನಲ್ಲಿ ಶ್ರೀ ರವಿಶಂಕರ್ ಆಶ್ರಮದಲ್ಲೂ ಈ ಸಿನಿಮಾವನ್ನು ತೋರಿಸಲಾಗಿದ್ದು, ಸ್ವತಃ ರವಿಶಂಕರ್ ಗುರೂಜಿ (Ravi Shankar Guruji) ಅವರೇ ಚಿತ್ರವನ್ನು ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ನಂತರ ಮಾತನಾಡಿರುವ ಅವರು, ‘ದಂಥಕಥೆಯನ್ನು ಮನರಂಜನಾತ್ಮಕವಾಗಿ ಹೇಳಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಸಿನಿಮಾ ಭರ್ಜರಿಯಾಗಿ ಗೆಲ್ಲುತ್ತಿದ್ದಂತೆಯೇ ಒಂದೊಂದೇ ವಿಘ್ನಗಳು ಕೂಡ ಹಿಂದೆ ಸರಿಯುತ್ತಿವೆ.  ಈ ಹಿಂದೆ ಕಾಂತಾರ ಸಿನಿಮಾದ ‘ವರಾಹ ರೂಪಂ’ ಹಾಡಿಗೆ ಕದ್ದಿರುವ ಆರೋಪ ಕೇಳಿ ಬಂದಿತ್ತು. ಈ ಹಾಡನ್ನು ತಮ್ಮ ನವರಸಂ ಗೀತೆಯಿಂದ ಕದ್ದಿರುವುದಾಗಿ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿತ್ತು. ಸೋಷಿಯಲ್ ಮೀಡಿಯಾದಲ್ಲಿ ಇದು ಭಾರೀ ಚರ್ಚೆಗೂ ಕಾರಣವಾಗಿತ್ತು. ದುಡ್ಡಿಗಾಗಿ ಅವರು ಆ ರೀತಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿತ್ತು. ಇದೀಗ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸದಸ್ಯರು ಉತ್ತರಿಸಿದ್ದು, ನಮಗೆ ಯಾವುದೇ ಹಣ ಬೇಕಿಲ್ಲ. ಕ್ರೆಡಿಟ್ ಕೊಟ್ಟು ಉಚಿತವಾಗಿ ಬಳಸಿಕೊಳ್ಳಬಹುದು ಎಂದು ತಂಡದ ಸದಸ್ಯ ವಿಯಾನ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ:‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಪುನೀತ್ ಪತ್ನಿ ಅಶ್ವಿನಿ

ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ಹಾಡೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿಕೊಂಡಿತ್ತು. ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ‘ವರಾಹ ರೂಪಂ’ ಹಾಡನ್ನು ಸಿನಿಮಾದಲ್ಲಿ ಬಳಸದಂತೆ ಕೋರ್ಟ್ ತಡೆಯಾಜ್ಞೆ ನೀಡಿತ್ತು, ಇದರಿಂದಾಗಿ ಚಿತ್ರಕ್ಕೆ ಕಾನೂನು ತೊಡಕು ಎದುರಾಗಿತ್ತು. ಈ ಹಾಡನ್ನು ನಾನು ಯಾವುದರಿಂದಲೂ ಕದ್ದಿಲ್ಲ ಎಂದು ಈಗಾಗಲೇ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರೂ, ಕೇರಳದ ಕೋಝಿಕ್ಕೋಡ್ ಕೋರ್ಟ್ ಈ ಹಾಡಿನ ಬಳಕೆಗೆ ತಡೆಯಾಜ್ಞೆ ನೀಡಿದೆ.

ಕೇರಳದ ತೈಕುಡಂ ಬಿಡ್ಜ್ ಬ್ಯಾಂಡ್ ಕಾಂತಾರ ಸಿನಿಮಾದ ವರಾಹ ರೂಪಂ ಹಾಡನ್ನು ತಮ್ಮ ಬ್ಯಾಂಡ್ ನ ಹಾಡಿನಿಂದ ಕದಿಯಲಾಗಿದೆ ಎಂದು ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿತ್ತು. ಕಾನೂನು ರೀತಿಯಲ್ಲಿ ಹೋರಾಟ ಮಾಡುವುದಾಗಿಯೂ ತಿಳಿಸಿತ್ತು. ಹಾಗಾಗಿ ತಂಡವು ಕೋಝಿಕೋಡ್ ಕೋರ್ಟ್ ಗೆ ಮೊರೆ ಹೋಗಿತ್ತು. ಈ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೈಕ್ಕುಡಂ ಬ್ರಿಡ್ಜ್ ನ ಅನುಮತಿ ಇಲ್ಲದೇ ಈ ಹಾಡನ್ನು ಬಳಸುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *