ಉಪೇಂದ್ರ ನಟನೆಯ ‘ಬುದ್ದಿವಂತ 2’ ಚಿತ್ರದಲ್ಲಿ ಶ್ರೀನಗರ ಕಿಟ್ಟಿ

Public TV
1 Min Read

ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಬುದ್ದಿವಂತ 2 (Buddhivanta 2) ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ (Srinagar Kitty) ವಿಶೇಷಪಾತ್ರದಲ್ಲಿ  ಕಾಣಿಸಿಕೊಂಡಿದ್ದಾರೆ. ಅದೊಂದು ಹೊಸ ಬಗೆಯ ಪಾತ್ರವಾಗಿದ್ದು, ಹಾಗಾಗಿ ಕಿಟ್ಟಿ ಒಪ್ಪಿಕೊಂಡು ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಪಾತ್ರದ ಮೂಲಕ ಚಿತ್ರಕ್ಕೆ ಹೊಸ ಆಯಾಮವನ್ನು ನೀಡುವ ಪ್ರಯತ್ನ ಮಾಡಿದ್ದಾರಂತೆ ನಿರ್ದೇಶಕರು.

ತಮ್ಮ ಅಮೋಘ ಅಭಿನಯದ ಮೂಲಕ‌ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ (Upendra) ಅಭಿನಯದ ‘ಬುದ್ದಿವಂತ 2’ ಚಿತ್ರ ಯಾವಾಗ ಬಿಡುಗಡೆಯಾಗಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು.‌ ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.‌ ವಿಡಿಯೋ ತುಣುಕೊಂದರ(ಗ್ಲಿಂಪ್ಸ್) ಮೂಲಕ  ಚಿತ್ರತಂಡ ಬುದ್ದಿವಂತ 2 ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.

ಬುದ್ದಿವಂತ ಎಂದೇ ಜನಪ್ರಿಯರಾಗಿರುವ ಉಪೇಂದ್ರ ಅವರ ಹುಟ್ಟುಹಬ್ಬ ಸೆಪ್ಟೆಂಬರ್ 18 ರಂದು. ಅವರ ಹುಟ್ಟುಹಬ್ಬದ ಸಮಯದಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳ ಸಂತಸ ಇಮ್ಮಡಿಯಾಗಲಿದೆ. ಇದನ್ನೂ ಓದಿ:ಉಪ್ಪಿ ಅಭಿಮಾನಿಗಳಿಗೆ ಗುಡ್ ನ್ಯೂಸ್- ‌’ಬುದ್ಧಿವಂತ 2′ ಬಿಗ್ ಅಪ್‌ಡೇಟ್

 

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಡಾ.ಟಿ.ಆರ್ ಚಂದ್ರಶೇಖರ್,  ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ ಮತ್ತೊಂದು ಅದ್ದೂರಿ ಚಿತ್ರ ಬುದ್ದಿವಂತ 2.

ಜೈದೇವ್ (Jaidev) ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ.  ಎಸ್ ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಜಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಉಪೇಂದ್ರ ಅವರಿಗೆ ನಾಯಕಿಯರಾಗಿ  ಸೋನಾಲ್ ಮೊಂಟೆರೊ ಹಾಗೂ  ಮೇಘನರಾಜ್ (Meghana Raj)ನಟಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್