ವಿಜಯೇಂದ್ರ ಆಯ್ಕೆಯಿಂದ ಆಕಾಂಕ್ಷಿಗಳಿಗೆ ನಿರಾಸೆ ಸಹಜ: ಶ್ರೀರಾಮುಲು

Public TV
1 Min Read

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ ವಿಜಯೇಂದ್ರ (B.Y Vijayendra) ಆಯ್ಕೆಯಾಗಿರುವುದರಿಂದ ಉಳಿದ ಆಕಾಂಕ್ಷಿಗಳಿಗೆ ನಿರಾಸೆಯಾಗುವುದು ಸಹಜ. ಆದರೆ ಅವರ ಆಯ್ಕೆಯಿಂದ ನಮಗೂ ಖುಷಿ ಇದೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು (Sriramulu) ಹೇಳಿದ್ದಾರೆ.

ಬೆಂಗಳೂರಿನ (Bengaluru) ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಪಕ್ಷದ ರಾಷ್ಟ್ರ ನಾಯಕರು ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಇದರಿಂದ ನಮಗೂ ಖುಷಿಯಾಗಿದೆ. ಆ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗುವುದು ಸಾಮಾನ್ಯ ಎಂದಿದ್ದಾರೆ. ಇದನ್ನೂ ಓದಿ: ಮೋದಿ, ಅಮಿತ್ ಶಾರಿಂದ ಸೂಕ್ತ ಸಮಯಕ್ಕೆ ಉತ್ತಮ ನಿರ್ಧಾರ: ಯಡಿಯೂರಪ್ಪ

ವಿಜಯೇಂದ್ರ ಅವರು ಯಡಿಯೂರಪ್ಪ ಗರಡಿಯಲ್ಲಿ ಪಳಗಿದ್ದಾರೆ. ಅವರಿಗೆ ನಮ್ಮ ಸಂಪೂರ್ಣ ಸಹಕಾರ ಇರಲಿದೆ. ಅವರೊಟ್ಟಿಗೆ ಸೇರಿ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಶ್ರೀರಾಮುಲು ಹೇಳಿದ್ದಾರೆ. ಇದನ್ನೂ ಓದಿ: ವಿಜಯೇಂದ್ರಗೆ ಪಕ್ಷದ ಸಾರಥ್ಯ – ಹುದ್ದೆ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣ ಮೌನ

Share This Article