ಮಂಡ್ಯ | ಸೆ.25ರಿಂದ ನಾಲ್ಕು ದಿನ ಶ್ರೀರಂಗಪಟ್ಟಣ ದಸರಾ

By
1 Min Read

ಮಂಡ್ಯ: ಈ ಬಾರಿ ಸೆಪ್ಟೆಂಬರ್ 25 ರಿಂದ 28 ರಿಂದ 4 ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ (Srirangapatna Dasara) ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಗಳು ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಸಚಿವ ಎನ್.ಚಲುವರಾಯಸ್ವಾಮಿ (Chaluvaraya Swamy) ತಿಳಿಸಿದ್ದಾರೆ.

ಇಂದು ಮಂಡ್ಯ (Mandya) ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮದ ಮೆರವಣಿಗೆಗೆ ಸೆಪ್ಟೆಂಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ಚಾಲನೆ ನೀಡಲಾಗುವುದು. ಕಾರ್ಯಕ್ರಮಗಳು ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಿ
ಶ್ರೀರಂಗಪಟ್ಟಣ ದಸರಾ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಕಾರ್ಯಕ್ರಮಗಳಲ್ಲಿ ನಮ್ಮ ಇತಿಹಾಸ ಹಾಗೂ ಸಂಸ್ಕೃತಿಗಳ ಹಿನ್ನೆಲೆ ಹೊಂದಿರಲಿದೆ. ಮಹಿಳೆಯರು, ಮಕ್ಕಳು, ಯುವಕರು, ವೃದ್ಧರು ಸೇರಿದಂತೆ ವಿವಿಧ ವಯೋಮಿತಿಗಳ ಜನರು ಭಾಗವಹಿಸುವ ರೀತಿ ಕಾರ್ಯಕ್ರಮಗಳನ್ನು ಅಧಿಕಾರಿಗಳು ವೈವಿದ್ಯಮಯವಾಗಿ ರೂಪಿಸಿ ದಸರಾ ಕಾರ್ಯಕ್ರಮಗಳನ್ನು ಯಾವುದೇ ಲೋಪವಿಲ್ಲದಂತೆ ಅಚ್ಚುಕಟ್ಟಾಗಿ ಸಂಘಟಿಸಿ ಎಂದು ಹೇಳಿದರು.

ಮೆರವಣಿಗೆಗೆ ಚಾಲನೆ ನೀಡುವ ಕಿರಂಗೂರು ಬನ್ನಿಮಂಟಪದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಕೈಗೊಂಡು ಸಿದ್ಧತೆಗಳನ್ನು ಪ್ರಾರಂಭಿಸಿ. ಯೋಗ ದಸರಾದಲ್ಲಿ ಯೋಗ ಪ್ರದರ್ಶನದೊಂದಿಗೆ ಯೋಗ ಸ್ಪರ್ಧೆಗಳನ್ನು ಸಹ ಆಯೋಜಿಸಿ. ಶಿಕ್ಷಣ ಇಲಾಖೆ ಅವರು ಯೋಗ ಸ್ಪರ್ಧೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಾಲಾ ಕಾಲೇಜುಗಳಿಗೆ ಮಾಹಿತಿ ನೀಡಿ ಎಂದರು.

Share This Article