ಪೊಲೀಸರ ಎದುರೇ SSLC ಹುಡುಗರ ಫೈಟ್ – ಎಸ್‌ಐ ಮೂಗಿಗೆ ಗಾಯ

Public TV
1 Min Read

ಬೆಳಗಾವಿ: ಪೊಲೀಸರ ಎದುರೇ ಕ್ಷುಲ್ಲಕ ಕಾರಣಕ್ಕೆ ಹೈಸ್ಕೂಲ್ ವಿದ್ಯಾರ್ಥಿಗಳ (Students) 2 ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು ಘಟನೆಯಲ್ಲಿ ಜಗಳ ಬಿಡಿಸಲು ಹೋದ ಎಸ್‌ಐ ಒಬ್ಬರ ಮೂಗಿಗೆ ಗಾಯವಾಗಿರುವ ಘಟನೆ ರಾಮದುರ್ಗ (Ramadurga) ಪಟ್ಟಣದಲ್ಲಿ ನಡೆದಿದೆ.

ರಾಮದುರ್ಗ ಪಟ್ಟಣದ ಶಾಲೆಯೊಂದರ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಕಬಡ್ಡಿ ಆಟದ ಅಭ್ಯಾಸದ ವೇಳೆ 2 ಗುಂಪುಗಳ ಮಧ್ಯೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಆಗಿದೆ. ಎರಡೂ ಗುಂಪುಗಳ ಮಕ್ಕಳನ್ನು ಸಮಾಧಾನ ಮಾಡಿ ಶಿಕ್ಷಕರು ಕಳುಹಿಸಿದ್ದಾರೆ. ಆದರೆ ರಾಮದುರ್ಗ ಬಸ್ ನಿಲ್ದಾಣದಲ್ಲಿಯೂ ವಿದ್ಯಾರ್ಥಿಗಳು ಬಡಿದಾಡಿಕೊಂಡಿದ್ದಾರೆ. ಇದನ್ನೂ ಓದಿ: ಮೂಲಭೂತ ಸೌಕರ್ಯವಿಲ್ಲದೇ ಕುಗ್ಗಿದ ಜನ- ಪಯಸ್ವಿನಿ ನದಿಗೆ ಬಿದಿರಿನ ಸೇತುವೆ ಸಂಕಷ್ಟ

ಈ ವೇಳೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ರಾಮದುರ್ಗ ಪೊಲೀಸರು ಆಗಮಿಸಿದ್ದಾರೆ. ಪೊಲೀಸರ ಎದುರೇ ಹುಡುಗರ ಫೈಟ್ ನಡೆದಿದ್ದು ಎರಡು ಗುಂಪುಗಳನ್ನು ಚದುರಿಸಲು ಪೊಲೀಸರು ಹೈರಾಣಾಗಿದ್ದಾರೆ. ಹೊಡೆದಾಡಿಕೊಳ್ಳುತ್ತಿದ್ದ ವಿದ್ಯಾರ್ಥಿಗಳನ್ನು ಚದುರಿಸುವಾಗ ಎಸ್‌ಐ ಮೂಗಿಗೆ ಗಾಯವಾಗಿದೆ. ಬಳಿಕ ಎರಡೂ ಗುಂಪುಗಳ ಕೆಲ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಹನುಮಂತನಿಗೆ ಅಪಮಾನ ಮಾಡಿದ ಆರೋಪ- ಶಪಥ ಮಾಡಿ ನದಿಯಲ್ಲೇ ಕುಳಿತ ಸ್ವಾಮೀಜಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್