ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಸಿಬ್ಬಂದಿ

0 Min Read

ಚಿಕ್ಕಮಗಳೂರು: ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಘಟನೆ ಚಿಕ್ಕಮಗಳೂರು (Chikkamagaluru) ನಗರದ ಎಂ.ಇ.ಎಸ್ ಕಾಲೇಜಿನಲ್ಲಿ (MES College) ನಡೆದಿದೆ.

- Advertisement -

ಸಿಇಟಿ ಪರೀಕ್ಷೆ (CET Exam) ಬರೆಯಲು ಬಂದ ಎಲ್ಲಾ ವಿದ್ಯಾರ್ಥಿನಿಯರ ಮೂಗುತಿಗೆ ಸಿಬ್ಬಂದಿ ಗಮ್ ಟೇಪ್ ಅಂಟಿಸಿ, ಪರೀಕ್ಷಾ ಕೇಂದ್ರದೊಳಗೆ ಕಳುಹಿಸಿದ್ದಾರೆ. ಆವರಣದಲ್ಲಿ ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿ ಬಳಿಕ ಒಳಗೆ ಕಳುಹಿಸಿದ್ದಾರೆ.

- Advertisement -

ಸಿಇಟಿ ಪರೀಕ್ಷೆಯಲ್ಲಿ ಅಕ್ರಮ ತಡೆಯುವ ಉದ್ದೇಶದಿಂದ ಕೆಇಎ ಈಗಾಗಲೇ ಹಲವಾರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಸಿಸಿಟಿವಿ ಕ್ಯಾಮರಾ, ಮುಖ ಚಹರೆ ಪತ್ತೆ ಸೇರಿದಂತೆ ಹಲವು ಕ್ರಮ ಕೈಗೊಂಡಿದೆ.

- Advertisement -

- Advertisement -

Share This Article