ಸ್ಟಾಲಿನ್ V/s ರವಿ ಸಂಘರ್ಷ- ವಿವಾದಾತ್ಮಕ ಆದೇಶ ವಾಪಸ್ ಪಡೆದ ಗವರ್ನರ್

Public TV
1 Min Read

ಚೆನ್ನೈ: ತಮಿಳುನಾಡಿನಲ್ಲಿ ಸ್ಟಾಲಿನ್ (M K Stalin) ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ಏರ್ಪಟಿದ್ದು, ಇದೀಗ ಈ ವಿವಾದಾತ್ಮಕ ಆದೇಶವನ್ನು ರಾಜ್ಯಪಾಲ ರವಿ ವಾಪಸ್ ಪಡೆದಿದ್ದಾರೆ.

ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ (Tamil Nadu Governor RN Ravi) ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಸಂಪರ್ಕಿಸದೇ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದರು. ಈ ಸಂಬಂಧ ಡಿಎಂಕೆಯಿಂದ ರಾಜ್ಯಪಾಲರ ವಿರುದ್ಧ ತೀವ್ರ ವಾಗ್ದಾಳಿ ವ್ಯಕ್ತವಾಗಿತ್ತು. ಅಲ್ಲದೆ ಮುಖ್ಯಮಂತ್ರಿಗಳ ಸೂಚನೆ ಇಲ್ಲದೆ ಸಚಿವ ಸ್ಥಾನದಿಂದ ವಜಾಗೊಳಿಸಿದ್ದು ತಪ್ಪು ಎಂದು ರಾಜ್ಯಪಾಲರ ನಡೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯಪಾಲರು ಈ ಆದೇಶವನ್ನು ವಾಪಸ್ ಪಡೆದಿದ್ದಾರೆ.

ಏನಿದು ಸಂಘರ್ಷ?: ಉದ್ಯೋಗಕ್ಕಾಗಿ ನಗದು ತೆಗೆದುಕೊಳ್ಳುವುದು, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಚಿವ ವಿ ಸೆಂಥಿಲ್ ಬಾಲಾಜಿ (Senthil Balaji) ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ತಮಿಳುನಾಡು ರಾಜಭವನದ ಪ್ರಕಟಣೆ ತಿಳಿಸಿತ್ತು. ಇದನ್ನೂ ಓದಿ: ಉಚಿತ ಪ್ರಯಾಣಕ್ಕೆ ಅವಕಾಶವಿದ್ರೂ ಟಿಕೆಟ್ ಪಡೆದು ಮಹಿಳೆಯರ ಪ್ರಯಾಣ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಆ) ವಿದ್ಯುತ್, ಅಬಕಾರಿ ಖಾತೆಯನ್ನು ಹೊಂದಿದ್ದ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿತ್ತು. ಬಂಧಿಸಿದ ಬಳಿಕ ಸ್ಟಾಲಿನ್ ಅವರು ಯಾವುದೇ ಖಾತೆಯನ್ನು ನೀಡದೇ ಸಂಪುಟದಲ್ಲಿ ಉಳಿಸಿದ್ದರು. ಹೀಗೆ ಯಾವುದೇ ಖಾತೆಯನ್ನು ನೀಡದೇ ಸಂಪುಟದಲ್ಲಿ ಉಳಿಸಿಕೊಂಡಿದ್ದು ಬಹಳ ಚರ್ಚೆಗೆ ಗ್ರಾಸವಾಗಿತ್ತು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್