ಲಕ್ನೋ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿರುವ (Barabanki) ದೇವಾಲಯವೊಂದರಲ್ಲಿ ಕಾಲ್ತುಳಿತ (Stampede) ಸಂಭವಿಸಿದೆ. ಇಬ್ಬರು ಭಕ್ತರು ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪವಿತ್ರ ಶ್ರಾವಣ ಮಾಸದ ಹಿನ್ನೆಲೆ ಇಂದು (ಸೋಮವಾರ) ಬಾರಾಬಂಕಿಯಲ್ಲಿರುವ ಪ್ರಾಚೀನ ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ (Awsaneshwar Mahadev Temple) ಭಕ್ತರು ದೇವರ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಕೆಲ ಕೋತಿಗಳು ಓವರ್‌ಹೆಡ್ ವಿದ್ಯುತ್ ತಂತಿಗಳ ಮೇಲೆ ಹಾರಿವೆ. ಇದರಿಂದ ವಿದ್ಯುತ್ ತಂತಿ ತುಂಡಾಗಿ ತಗಡಿನ ಶೆಡ್ ಮೇಲೆ ಬಿದ್ದಿದ್ದು ದುರಂತಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಕಠಿಣ ಸಂದರ್ಭದಲ್ಲೂ ಅಭಿವೃದ್ಧಿಯ ದೀಪ ಬೆಳಗಿಸಬಹುದು – ಮಾಜಿ ಮಾವೋವಾದಿಗಳ ಮೀನು ಕೃಷಿಗೆ ಮೋದಿ ಶ್ಲಾಘನೆ
ಕೆಲವರಿಗೆ ನೇರವಾಗಿ ವಿದ್ಯುತ್ ಶಾಕ್ ತಗುಲಿದೆ. ಇದರಿಂದ ಇತರ ಭಕ್ತರಲ್ಲೂ ಆತಂಕ ಹೆಚ್ಚಾಗಿ ನೂಕು ನುಗ್ಗಲು ಶುರುವಾಗಿ, ಕಾಲ್ತುಳಿತ ಉಂಟಾಗಿದೆ. ಕಾಲ್ತುಳಿತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 29 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನ ಸಮೀಪದ ತ್ರಿವೇದಿಗಂಜ್ ಸಮುದಾಯ ಆರೋಗ್ಯ ಕೇಂದ್ರಕ್ಕೆ (CHC) ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶಶಾಂಕ್ ತ್ರಿಪಾಠಿ ತಿಳಿಸಿದ್ದಾರೆ. ಇದನ್ನೂ ಓದಿ: Mann ki Baat: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಮೋದಿ ಪ್ರಶಂಸೆ
ಘಟನೆ ತಿಳಿದ ಸಿಎಂ ಯೋಗಿ ಆದಿತ್ಯನಾಥ್ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಗಾಯಾಳುಗಳಿಗೆ ತ್ವರಿತ ಪರಿಹಾರ ಮತ್ತು ಸರಿಯಾದ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರ | ಲೋಕಸಭೆಯಲ್ಲಿಂದು 16 ಗಂಟೆಗಳ ಮ್ಯಾರಥಾನ್ ಚರ್ಚೆ, ಪ್ರಧಾನಿ ಮೋದಿ ಭಾಗಿ