– ನಕ್ಸಲ್ ಪೀಡಿತ ಪ್ರದೇಶದಲ್ಲಿ ರೆಸಾರ್ಟ್ ಹೇಗೆ ಮಾಡಿದ?
– ಎಡಪಂಥೀಯರ ತಂಡದಿಂದ ವ್ಯವಸ್ಥಿತ ಪಿತೂರಿ; ಆರೋಪ
ಚಿಕ್ಕಮಗಳೂರು: ಧರ್ಮಸ್ಥಳ ಪ್ರಕರಣದ (Dharmasthala Case) ಬಗ್ಗೆ ನಿತ್ಯ ಸೋಷಿಯಲ್ ಮೀಡಿಯಾದಲ್ಲಿ ಕಥೆ ಹೇಳ್ತಿರುವ ಗಿರೀಶ್ ಮಟ್ಟಣ್ಣನವರ್ (Girish Mattannavar) ನಕ್ಸಲ್ ಪೀಡಿತ ಪ್ರದೇಶದಲ್ಲಿ ರೆಸಾರ್ಟ್ ಮಾಡಿದ್ದಾನೆ. ಈತನಿಗೆ ಎಲ್ಲಿಂದ ಆದಾಯ ಬಂತು? ಅಂತ ರಾಜ್ಯ ಬ್ರಾಹ್ಮಣ ಅರ್ಚಕರು ಹಾಗೂ ಪುರೋಹಿತ ಪರಿಷತ್‌ನ ಉಪಾಧ್ಯಕ್ಷ ರಘುಪತಿ ಭಟ್ ಗಂಭೀರ ಆರೋಪ ಮಾಡಿದ್ದಾರೆ.
ಚಿಕ್ಕಮಗಳೂರಿನಲ್ಲಿ (Chikkamagaluru) ಮಾಧ್ಯಮ ಹೇಳಿಕೆ ನೀಡಿರುವ ಅವರು, ಗಿರೀಶ್ ಮಟ್ಟಣ್ಣನವರ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ – ಸಾಮೂಹಿಕ ಶಿವಪಂಚಾಕ್ಷರಿ ಮಂತ್ರ ಜಪಿಸಲು VHP ಕರೆ
ಗಿರೀಶ್ ಮಟ್ಟಣ್ಣನವರ್ ಶೃಂಗೇರಿ ಸಿರಿಮನೆ ಫಾಲ್ಸ್ *(Sirimane Falls) ಹತ್ತಿರ ಹತ್ತಾರು ಎಕ್ರೆಯಲ್ಲಿ ರೆಸಾರ್ಟ್ ಮಾಡಿದ್ದಾನೆ. ಇವನಿಗೆ ಆದಾಯ ಎಲ್ಲಿಂದ ಬರುತ್ತೆ? ಸಿರಿಮನೆ, ಕಿಗ್ಗಾ, ಬುಕ್ಕಡಿಬೈಲ್ ಸುತ್ತಮುತ್ತಲಿನ ಪ್ರದೇಶ ನಕ್ಸಲ್ ಪೀಡಿತ ಪ್ರದೇಶವಾಗಿದೆ. ಆ ನಕ್ಸಲ್ ಪೀಡಿತ ಜಾಗದಲ್ಲಿ ದೊಡ್ಡ ರೆಸಾರ್ಟ್ ಮಾಡಿದ್ದಾನೆ. ಸರ್ಕಾರ ಅದಿವಾಸಿಗಳಿಗೆ ನೀಡಿದ ವಸತಿ ಪ್ರದೇಶದಲ್ಲಿ ರೆಸಾರ್ಟ್ ಮಾಡಿದ್ದಾನೆ. ಇದೆಲ್ಲವನ್ನ ಹೇಗೆ ಮಾಡಿದ? ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: 13 ವರ್ಷದ ಹಿಂದೆ ಧರ್ಮಸ್ಥಳಕ್ಕೆ ಬಂದಿದ್ದ ನನ್ನ ತಂಗಿ ವಾಪಸ್ ಬರಲೇ ಇಲ್ಲ – ಎಸ್‌ಐಟಿಗೆ ದೂರು ನೀಡಿದ ಸಹೋದರ
ಎಡಪಂಥೀಯರ ತಂಡದಿಂದ ವ್ಯವಸ್ಥಿತ ಪಿತೂರಿ
ಇದು ಧರ್ಮಸ್ಥಳ ಹಾಗೂ ಧರ್ಮದ ಮೇಲೆ ಆಗ್ತಿರೋ ಗದಾ ಪ್ರಹಾರ. ದೇಶ ವಿರೋಧಿಗಳು, ಮತಾಂದರು ಹಿಂದೂಗಳ ಮೇಲೆ ಭಯೋತ್ಪಾದನೆ ಮಾಡ್ತಿದ್ದಾರೆ. ಅದಕ್ಕೆ ತತ್ಸಮಾನವಾಗಿ ಎಡಪಂಥಿಯರ ತಂಡ ಧರ್ಮದ ಮೇಲೆ ದಾಳಿ ಮಾಡ್ತಿದ್ದಾರೆ. ನಗರ ನಕ್ಸಲರು, ಕಾಡಿನಲ್ಲಿದ್ದವರಿಗೆ ಪರಿಹಾರ ನೀಡಿದ್ದು ಎಲ್ಲರೂ ನಗರದಲ್ಲಿದ್ದಾರೆ. ಅವರೆಲ್ಲರ ಸಹಕಾರದಿಂದ ಎಡಪಂಥೀಯರು ಸೇರಿ ವ್ಯವಸ್ಥಿತ ಪಿತೂರಿ ಮಾಡಿದ್ದಾರೆ ಎಂದು ದೂರಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ| ಇದೊಂದು ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ
ಸಾವಿರಾರು ಶವ ಹೂಳಲು ಸಾಧ್ಯವೇ?
ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆಗೆ ನಮ್ಮ ವಿರೋಧ ಇಲ್ಲ. ಕಾನೂನು ಪ್ರಕಾರ ತನಿಖೆಯಾಗಲಿ. ಯಾವನೋ ಒಬ್ಬ ಅನಾಮಿಕ ತಲೆಬುರುಡೆ ತಂದ ತಕ್ಷಣ ಎಸ್‌ಐಟಿ ರಚನೆ ಮಾಡಿ ತನಿಖೆ ಮಾಡ್ತಿದ್ದಾರೆ. ತಂದವರ ಬಗ್ಗೆ ಯಾವ ಕ್ರಮವಿಲ್ಲ, ಒಬ್ಬ ವ್ಯಕ್ತಿ ಸಾವಿರಾರು ಶವ ಹೂಳಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದ್ದಾರೆ ರಘುಪತಿ ಭಟ್. ಇದನ್ನೂ ಓದಿ: ವರ್ಷಕ್ಕೆ 5 ಸಾವಿರ ಉಳಿತಾಯ – ವಾರ್ಷಿಕ ಟೋಲ್ ಪಾಸ್ | ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ