ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

1 Min Read

ಬೆಂಗಳೂರು: ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ನನ್ನು ಅರೆಸ್ಟ್ ಮಾಡಲಾಗಿದೆ.

ನೊಂದ ಸಂತ್ರಸ್ತೆ ಉಪ್ಪಾರಪೇಟೆ ಠಾಣೆಯಲ್ಲಿ (Upparpet Police Station) ರಿಜಿಸ್ಟ್ರಾರ್‌ ಮಲ್ಲು ವಿರುದ್ಧ ದೂರು ದಾಖಲಿಸಿದ್ದಾರೆ. ಗಾಂಧೀನಗರದಲ್ಲಿರುವ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಕೆಲಸ ಮಾಡುವಾಗ ಲೈಂಗಿಕ ಕಿರುಕುಳ ನೀಡಿದ್ದಾರೆ. ಅಲ್ಲದೇ ಅಂಗಾಂಗ ಮುಟ್ಟಿ, ಎಳೆದಾಡಿ ದೌರ್ಜನ್ಯ ಎಸಗಿದ್ದಾರೆ. ಕಾರಿನ ಬಳಿ ಬಲವಂತವಾಗಿ ತಬ್ಬಿಕೊಂಡು ಮುತ್ತು ಕೊಡಲು ಹಾಗೂ ಬಲವಂತವಾಗಿ ಕಾರು ಹತ್ತಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

ಸಂತ್ರಸ್ತೆ ನೀಡಿದ ದೂರಿನನ್ವಯ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ರಿಜಿಸ್ಟ್ರಾರ್‌ನನ್ನು ಬಂಧಿಸಿದ್ದಾರೆ.

Share This Article