ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಹೋರಾಟ: ಕಟೀಲ್

Public TV
2 Min Read

ಬೆಂಗಳೂರು: ರಾಜ್ಯದಲ್ಲಿರುವ ಕೆಟ್ಟ ಸರ್ಕಾರದ ವಿರುದ್ಧ ಸೋಮವಾರ ಹಾಗೂ ಮಂಗಳವಾರ ಎಲ್ಲಾ ಜಿಲ್ಲೆ ಮತ್ತು ಮಂಡಲಗಳಲ್ಲಿ ಬಿಜೆಪಿ (BJP) ದೊಡ್ಡ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ (Nalin Kumar Kateel) ಕಟೀಲ್ ತಿಳಿಸಿದ್ದಾರೆ.

ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸೇರಿ ಸಭೆ ನಡೆಸಿದ್ದೇವೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾಧ್ಯಕ್ಷರು ನಾಳೆ ಜಿಲ್ಲೆಗಳಲ್ಲಿ ಮತ್ತು ಮಂಡಲ ಅಧ್ಯಕ್ಷರು ನಾಡಿದ್ದು ಮಂಡಲಗಳಲ್ಲಿ ಹೋರಾಟ ನಡೆಸಲು ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ನಗದು ಅಭಿವೃದ್ಧಿ ಇಲಾಖೆ ಎಂದರೆ ಡಿಕೆಶಿಯದ್ದಾ – ಹೆಚ್‌ಡಿಕೆ ತಿರುಗೇಟು

ಅಧಿಕಾರಿಗಳಿಗೇ ರೇಟ್ ಫಿಕ್ಸ್ ಮಾಡಿದ ಸರ್ಕಾರವಿದು. ಅಧಿಕಾರಿಗಳಿಂದ ಭ್ರಷ್ಟಾಚಾರ ಆರಂಭಿಸಿದ ಈ ಸರ್ಕಾರ ಕಲಾವಿದರನ್ನೂ ಬಿಟ್ಟಿಲ್ಲ. ತಮ್ಮಲ್ಲಿ ಲಂಚ ಕೇಳಿದ್ದಾಗಿ ಮೈಸೂರು ದಸರಾದಲ್ಲಿ ಭಾಗವಹಿಸಬೇಕಾದ ಕಲಾವಿದರೇ ಆರೋಪ ಮಾಡಿದ್ದಾರೆ. ಹಿಂದೆ ಎಟಿಎಂ ಸರ್ಕಾರ ಬರಲಿದೆ ಎಂದಾಗ ಸಾಕ್ಷಿ ಕೊಡಿ ಎಂದಿದ್ದರು. ಇವತ್ತು ಸಾಕ್ಷಿ ಹಾಗೂ ಆಧಾರಗಳನ್ನು ಸಿದ್ರಾಮಣ್ಣ (Siddaramaiah), ಡಿ.ಕೆ.ಶಿವಕುಮಾರ್ (DK Shivakumar) ಇಟ್ಟಿದ್ದಾರೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದರು.

ಐಟಿ ದಾಳಿ ಆದಾಗ ಗುತ್ತಿಗೆದಾರ, ಬಿಲ್ಡರ್‍ಗಳ ಮನೆಯಲ್ಲಿ 40 ಕೋಟಿ, 50 ಕೋಟಿ ಹಣ ಸಿಗುತ್ತಿದೆ. 600 ಕೋಟಿ ಹಣ ಗುತ್ತಿಗೆದಾರರಿಗೆ ಬಿಡುಗಡೆ ಮಾಡಿದ ಎರಡೇ ದಿನಗಳಲ್ಲಿ 45 ಕೋಟಿ ಒಬ್ಬ ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದೆ. ಇದಕ್ಕೂ ಕಾಂಗ್ರೆಸ್‍ಗೂ ಸಂಬಂಧ ಇದೆ ಎಂಬುದು ಸ್ಪಷ್ಟವಾಗಿದೆ. ಈ ಲೂಟಿ ಸರ್ಕಾರದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯದಲ್ಲಿರುವುದು ಎಟಿಎಂ ಸರ್ಕಾರವಾಗಿದೆ. ಈ ರಾಜ್ಯದಲ್ಲಿ ಜನರ ಹಣವನ್ನು ಲೂಟಿ ಮಾಡಿ ಪಂಚರಾಜ್ಯಗಳ ಚುನಾವಣೆಗೆ ಅದನ್ನು ಕಳುಹಿಸುತ್ತಿದ್ದಾರೆ. ಬೇರೆ ರಾಜ್ಯಗಳ ಚುನಾವಣೆಗೆ ಕರ್ನಾಟಕವು ಎಟಿಎಂ ಆಗಿದೆ. ಇವತ್ತು ಇನ್ನೊಬ್ಬರ ಮನೆಯಲ್ಲಿ ಹಣ ಸಿಕ್ಕಿದ್ದು, ಇದೆಲ್ಲವೂ ಲೂಟಿ ಹಣವಾಗಿದೆ. ದೂರು ಕೊಡುವ ಅಧಿಕಾರಿಗಳನ್ನು ಬಂಧಿಸಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಂಬಿಕಾಪತಿ, ಸಂತೋಷ್‌ ಕೃಷ್ಣಪ್ಪ ರಾಜ್ಯದ ನಂ 1, ನಂ 2 ಅವರ ಬೇನಾಮಿಗಳು: ಸಿಟಿ ರವಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್