ಬೆಳಗಾವಿ | ‘ಐ ಲವ್ ಮುಹಮ್ಮದ್’ ಘೋಷಣೆ ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ – 50 ಮಂದಿ ವಿರುದ್ಧ FIR

Public TV
2 Min Read

ಬೆಳಗಾವಿ: ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವತ್ತು ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

ಕಲ್ಲು ತೂರಾಟವಾಗುತ್ತಿದ್ದಂತೆ ಖಡಕ್ ಗಲ್ಲಿ ನಿವಾಸಿಗಳು ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ 10 ಜನರ ಹೆಸರು ಉಲ್ಲೇಖಿಸಿ, ಒಟ್ಟು 50 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಇದನ್ನೂ ಓದಿ: Belagavi | ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ ಘೋಷಣೆ – ಪ್ರಶ್ನಿಸಿದ್ದಕ್ಕೆ ಕಲ್ಲು ತೂರಾಟ

ತನಿಖೆಗಿಳಿದ ಪೊಲೀಸರು ಕೈಯಲ್ಲಿ ತಲ್ವಾರ್ ಹಿಡಿದು ಐ ಲವ್ ಮೊಹಮ್ಮದ್ ಸೇರಿ ಧಾರ್ಮಿಕ ಘೋಷಣೆ ಕೂಗಿದ್ದ ಗುಂಪನ್ನು ಹೆಡೆಮುರಿ ಕಟ್ಟಿದ್ದಾರೆ. ಈಗಾಗಲೇ 11 ಜನರನ್ನು ವಶಕ್ಕೆ ಪಡೆದಿದ್ದಾರೆ.

ಏನಿದು ಪ್ರಕರಣ?
ಮಾಬುಸುಬಾನಿ ದರ್ಗಾದ ಉರುಸ್ ವೇಳೆ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ ಹಿನ್ನೆಲೆ ಆಕ್ರೋಶ ವ್ಯಕ್ತವಾಗಿದೆ. ಪ್ರಶ್ನೆ ಮಾಡಿದ ಸ್ಥಳೀಯ ಹಿಂದೂ ನಿವಾಸಿಗಳ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿ ವರ್ಷ ಶನಿವಾರ ಕೂಟ, ಜಾಲ್ಗಾರ ಗಲ್ಲಿ ಮಾರ್ಗದ ಮೂಲಕ ದರ್ಗಾಗೆ ಮೆರವಣಿಗೆ ಹೋಗುತ್ತಿತ್ತು. ಈ ವರ್ಷ ಅನುಮತಿ ಇಲ್ಲದೆಯೂ ಸಹ ಖಡಕ್ ಗಲ್ಲಿಗೆ ಮೆರವಣಿಗೆ ಎಂಟ್ರಿಯಾಗಿದೆ ಎನ್ನಲಾಗಿದೆ. ಮೆರವಣಿಗೆ ವೇಳೆ `ಐ ಲವ್ ಮುಹಮ್ಮದ್’ ಎಂಬ ಘೋಷಣೆ ಕೂಗಿದ್ದಲ್ಲದೇ ಯಾವಾಗಲೂ ಬಾರದ ಮೆರವಣಿಗೆ ಈಗ ಯಾಕೆ ಬಂದಿದೆ? ತಮ್ಮ ಏರಿಯಾಗೆ ಬಂದು ಘೋಷಣೆ ಕೂಗಿದ್ದು ಯಾಕೆ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ನಡೆದಿದೆ. ಬಳಿಕ ತಲ್ವಾರ್ ಕೂಡ ಪ್ರದರ್ಶನ ಮಾಡಿ ಗೂಂಡಾವರ್ತನೆ ತೋರಲಾಗಿದೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೆರವಣಿಗೆಯನ್ನು ಸ್ಥಳದಿಂದ ಕಳುಹಿಸಿದ್ದಾರೆ. ಏಕಾಏಕಿ ಮೆರವಣಿಗೆ ಬಂದವರು ಮತ್ತು ಕಲ್ಲು ತೂರಿದವರ ವಿರುದ್ಧ ಕ್ರಮಕ್ಕೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ನಾರಾಯಣ ಭರಮನಿ, ಇಬ್ಬರು ಡಿಸಿಪಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ:ಅಮೆರಿಕ ಧ್ವಜ ಸುಟ್ಟರೆ ತಕ್ಷಣ ಬಂಧನ, 1 ವರ್ಷ ಜೈಲು ಶಿಕ್ಷೆ: ಡೊನಾಲ್ಡ್‌ ಟ್ರಂಪ್‌ ಆದೇಶ

Share This Article