ಮೈಸೂರು: ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಠಾಣೆ ಮೇಲೆಯೇ ಕಲ್ಲು ತೂರಾಟ – 14 ಪೊಲೀಸರಿಗೆ ಗಾಯ

Public TV
1 Min Read

– ಪೊಲೀಸ್‌ ವಾಹನದ ಮೇಲೂ ಕಲ್ಲು ತೂರಾಟ

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರು ನಡೆಸಿದ ಕಲ್ಲಿನ ದಾಳಿಯಲ್ಲಿ ಇನ್‌ಸ್ಪೆಕ್ಟರ್ ಸೇರಿದಂತೆ 14 ಪೊಲೀಸರಿಗೆ ಗಾಯಗಳಾಗಿವೆ. 10 ಕ್ಕೂ ಹೆಚ್ಚು ಪೊಲೀಸ್ ವಾಹನಗಳ ಜಖಂ ಆಗಿವೆ.

ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಇನ್‌ಸ್ಪೆಕ್ಟರ್ ಸೇರಿ 14 ಕ್ಕೂ ಹೆಚ್ಚು ಪೊಲೀಸರಿಗೆ ಗಾಯವಾಗಿದೆ. ಎಸಿಪಿ ಶಾಂತ ಮಲ್ಲಪ್ಪ, ನಜರಬಾದ್ ಇನ್ಸ್ಪೆಕ್ಟರ್ ಮಹದೇವಸ್ವಾಮಿ ಸೇರಿ 14 ಮಂದಿಗೆ ಕಲ್ಲೇಟು ಬಿದ್ದಿದೆ.

ಕಲ್ಲೇಟಿನಿಂದ ಗಾಯಗೊಂಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 10 ಕ್ಕೂ ಪೊಲೀಸ್ ವಾಹನಗಳ ಮೇಲೆ ಕಲ್ಲೂ ತೂರಾಟ ನಡೆದಿದೆ.

ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕಲ್ಯಾಣಗಿರಿಯ ಸುರೇಶ್ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕೃತ ಫೇಸ್‌ಬುಕ್‌ನಲ್ಲಿ ಮಾಹಿತಿಯನ್ನು ಮೈಸೂರು ನಗರ ಪೊಲೀಸರು ಹಂಚಿಕೊAಡಿದ್ದಾರೆ.

ಸುರೇಶ್ ಫೋಟೊ ಹಾಗೂ ಎಫ್‌ಐಆರ್ ಪ್ರತಿಯನ್ನ ಸಾಮಾಜಿಕ ಜಾಲಾತಾಣದಲ್ಲಿ ಪೊಲೀಸರು ಹಂಚಿಕೊAಡಿದ್ದಾರೆ. ಸುರೇಶ್ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ವಿಚಾರಕ್ಕೆ ಗಲಾಟೆ ತೆಗೆದಿರುವ ಸ್ಥಳೀಯರು ದಾಂಧಲೆ ಸೃಷ್ಟಿಸಿದ್ದಾರೆ. ಪೊಲೀಸ್ ಠಾಣೆ ಹಾಗೂ ಪೊಲೀಸ್ ವಾಹನದ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟ ಮಾಡಿದವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಉದಯಗಿರಿ ಠಾಣೆ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನ ವಶಕ್ಕೆ ಪಡೆದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಯುವಕರನ್ನ ಮಾರ್ಕ್ ಮಾಡಿ ಕ್ರಮಕ್ಕೆ ಮುಂದಾಗಿದ್ದಾರೆ.

Share This Article